“ಪೊಲೀಸ್ ಹುತಾತ್ಮರ ದಿನಾಚರಣೆ”ಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನುಸಲ್ಲಿಸಲಾಯಿತು
ದಿನಾಂಕ 21-10-2023 ರಂದು ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಡಾ|| ಸೆಲ್ವಮಣಿ ಆರ್, ಐಎಎಸ್ ರವರು ವಹಿಸಿದ್ದು, ಮುಖ್ಯ ಆಹ್ವಾನಿತರಾಗಿ ಶ್ರೀ ಲೋಖಂಡೆ ಸ್ನೇಹಲ್ ಸುಧಾಕರ್ ಐ.ಎ.ಎಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಶ್ರೀ ಶಿವಶಂಕರ್ ಈ ಐ.ಎಫ್.ಎಸ್ ಡಿ.ಸಿ.ಎಫ್ ಶಿವಮೊಗ್ಗ…