ಗ್ರಾಮೀಣ ಭಾಗದ ಆರ್ಥಿಕ ಚಟುವಟಿಕೆಗಳು ಹೆಚ್ಚಬೇಕು : ಕೆ.ಎನ್.ರಾಜಣ್ಣ ರಾಜ್ಯ ಸಹಕಾರ ಸಚಿವರು
ಶಿವಮೊಗ್ಗ, ಆಗಸ್ಟ್ 05 :ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಹಕಾರಿ ಇಲಾಖೆಗಳು ಕೆಲಸ ಮಾಡಬೇಕು. ಹಾಗೂ ಸಂಘಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಜಿಲ್ಲೆಯ ಸಹಕಾರ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.1975 ರಲ್ಲಿ ವಿವಿಧ ರೀತಿಯ ಸಹಕಾರ ಸಂಘಗಳನ್ನು ಸಂಯೋಜಿಸಿ ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ರಚಿಸಲಾಯಿತು. ಎಲ್ಲ ರೈತರಿಗೆ ಸಾಲ ಸೌಲಭ್ಯ…