ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತು ಪೂರ್ವಭಾವಿ ಸಭೆ
ಶಿವಮೊಗ್ಗ, ಜುಲೈ 15 :ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ವೇಳೆ ನೀಡಿರುವ ಅಂಶಗಳು ಹಾಗೂ ಹೆಚ್ಚುವರಿ ಸೌಕರ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.78 ಆಸನ ವ್ಯವಸ್ಥೆಯುಳ್ಳ ಎಟಿಆರ್-72…