ಕೊಪ್ಪಳ: ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಆರೋಪಿಗಳ ಬಂಧನ, ನಾಪತ್ತೆಯಾದ ಮತ್ತೊಬ್ಬ ಆರೋಪಿಗಾಗಿ ತೀವ್ರ ಶೋಧ.
ಈ ಸಂಬಂಧ ನಿನ್ನೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತರ ಆರೋಗ್ಯ ತಪಾಸಣೆಮಾಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪದ ಎಡದಂಡೆ ಕಾಲುವೆ ಬಳಿ ಈ ಘಟನೆ ನಡೆದಿದೆ.ದೇಶ ಮತ್ತು ವಿದೇಶಿ ಪ್ರವಾಸಿಗರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರ ಮೇಲೆ ಹಲ್ಲೆ ಮಾಡಿ ಅವರನ್ನು ನಾಲೆಗೆ ದೂಡಿದ್ದರು. ಉಳಿದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು…