ಎಸ್ಎಂ ಕೃಷ್ಣ ವಿಧಿವಶ, ನಾಳೆ (ಡಿ,11ರಂದು) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ!
ಎಸ್ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ! ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ವಿಧಿವಶರಾದ ಹಿನ್ನಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಅಶ್ವಸೂರ್ಯ/ಬೆಂಳೂರು(ಡಿ.10): ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ 92ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣ ತಮ್ಮ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಇದರ ಹಿನ್ನಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.