ಹೊಸನಗರ ಮೂಲದ ಮಲೆನಾಡ ಮಣ್ಣಿನ ಮಗ ವಾಯುಪಡೆಯ ಸೇನಾನಿ ಮಂಜುನಾಥ್ ಇನ್ನಿಲ್ಲ.!
ಘಟನೆಯ ನಂತರ ಮಂಜುನಾಥ್ ಅವರಿಗಾಗಿ ಶೋಧ ಕಾರ್ಯ ನಡೆಸಿದಾಗ ಸಮೀಪದ ಜಮೀನಿನಲ್ಲಿ ಅವರ ದೇಹ ಪತ್ತೆಯಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾದರು ಪರೀಕ್ಷಿಸಿದ ವೈದ್ಯರು ಮಂಜುನಾಥ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ವಿಮಾನದಿಂದ ಹಾರಿದ ನಂತರ ಪ್ಯಾರಾಚೂಟ್ ತೆರೆದುಕೊಳ್ಳದೆ ಮಂಜುನಾಥ್ ಅವರು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರು ಸಾಗರದಲ್ಲಿ ಪಿಯುಸಿ ಮುಗಿಸಿದ ನಂತರ ಭಾರತೀಯ ವಾಯು ಪಡೆಗೆ ಸೇರಿದ್ದರು. ವೈ ಗ್ರೇಡ್ ಅಧಿಕಾರಿಯಾಗಿದ್ದ ವಾರಂಟ್ ಅಫೀಸರ್ ಮಂಜುನಾಥ್, ಅಸ್ಸಾಂನಲ್ಲಿ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಸಾಂ ಮೂಲದ…