ಶಿವಮೊಗ್ಗ: ವಸತಿ ರಹಿತರಿಗೆ ನಿವೇಶನ ಒದಗಿಸಲು ಅಗತ್ಯ ಕ್ರಮ : ಹೆಚ್.ಎಸ್. ಸುಂದರೇಶ್.
ಶಿವಮೊಗ್ಗ: ವಸತಿ ರಹಿತರಿಗೆ ನಿವೇಶನ ಒದಗಿಸಲು ಅಗತ್ಯ ಕ್ರಮ : ಹೆಚ್.ಎಸ್.ಸುಂದರೇಶ್ ಅಶ್ವಸೂರ್ಯ/ಶಿವಮೊಗ್ಗ : ಸ್ವಂತ ಸೂರೊಂದನ್ನು ಕಟ್ಟಿಕೊಳ್ಳಬೇಕೆಂಬ ಕನಸನ್ನು ಹೊಂದಿದ್ದು, ನಿವೇಶನದ ನಿರೀಕ್ಷೆಯಲ್ಲಿರುವ ಶಿವಮೊಗ್ಗದ ಅಸಂಖ್ಯಾತ ವಸತಿರಹಿತರನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಟ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಹೇಳಿದರು.ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ನಗರದ ಹೊರವಲಯದಲ್ಲಿರುವ…