ಸಿದ್ದರಾಮಯ್ಯ ಪತ್ನಿ ಗೌರಮ್ಮನಂತವರು ಅವರ ಮೇಲೆ ಆಪಾದನೆ ಬರದೇ ಇರಲಿ: ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ

ಸಿದ್ದರಾಮಯ್ಯ ಪತ್ನಿ ಗೌರಮ್ಮನಂತವರು ಅವರ ಮೇಲೆ ಆಪಾದನೆ ಬರದೇ ಇರಲಿ: ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ

ಅಶ್ವಸೂರ್ಯ/ಶಿವಮೊಗ್ಗ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸುವ ವಿಶ್ವಾಸವಿದೆ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಸುದ್ದಿ ಗೋಷ್ಠಿಯಲ್ಲಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಈಶ್ವರಪ್ಪನವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಟ್ಟು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜೀನಾಮೆ ನೀಡಬೇಕು. ನನ್ನ ಮೇಲೆ ಆಪಾದನೆ ಬಂದಾಗ ನಾನು ಕೂಡ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೆನು ಎಂದರು.
ಆದರೆ ಈ ಪ್ರಕರಣದ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರನ್ನು ಪ್ರಕರಣದಲ್ಲಿ ಸೇರಿಸಿಬಿಡುತ್ತಾರೋ ಅಂತಾ ಅನುಮಾನವಿದೆ. ಪಾಪ ಅವರು ಗೌರಮ್ಮನ ರೀತಿ‌ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬರದೇ ಇರಲಿ ಎಂಬುದಾಗಿ ದೇವರಲ್ಲಿ ಬೇಡಿಕೊಳ್ಳುತ್ತೇನೆ’ ಎಂದು ಹೇಳಿದರು‌.
ಸಿದ್ದರಾಮಯ್ಯನವರು ಕಾನೂನು ಬದ್ಧವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಪಡೆದು ಪ್ರಕರಣದಿಂದ ಯಶಸ್ವಿಯಾಗಿ ಹೊರಗೆ ಬರಲಿ’ ಎಂದು ಆಶಿಸುತ್ತೇನೆ ಎಂದರು.

Leave a Reply

Your email address will not be published. Required fields are marked *

Optimized by Optimole
error: Content is protected !!