ವೆಸ್ಟ್ ಬೆಂಗಾಲ್ ನಲ್ಲಿ ಮತ್ತೊಂದು ಭೀಕರ ಹತ್ಯೆ; ಯುವತಿಯ ಕತ್ತು ಕತ್ತರಿಸಿ ಹತ್ಯೆಮಾಡಿದ ಹಂತಕರು.!

ವೆಸ್ಟ್ ಬೆಂಗಾಲ್ ನಲ್ಲಿ ಮತ್ತೊಂದು ಭೀಕರ ಹತ್ಯೆ; ಯುವತಿಯ ಕತ್ತು ಕತ್ತರಿಸಿ ಹತ್ಯೆಮಾಡಿದ ಹಂತಕರು.!

ಅಶ್ವಸೂರ್ಯ/ಶಿವಮೊಗ್ಗ: ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಇತ್ತೀಚೆಗೆ ನಡೆದಿದ್ದ ಯುವ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಘಟನೆಯನ್ನು ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ವೈದ್ಯ ಸಮೂಹ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.ಇದರ ಬೆನ್ನಿಗೆ ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ಯುವತಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು ಸಂಪೂರ್ಣ ರಾಜ್ಯವೆ ಮತ್ತೊಮ್ಮೆ ಬೆಚ್ಚಿಬಿದ್ದಿದೆ.
ಶಾಂತಿ, ಸಹನೆಗೆ ಹೆಸರಾಗಿದ್ದ ಶಕ್ತಿ ಗರ್ ಜಿಲ್ಲೆ ನಾಡೂರು ಹಳ್ಳಿ ಸಮೀಪದ ಜಪ್ನಾತಾಲ ಆದಿವಾಸಿ ಪಾರಾದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಪ್ರಿಯಾಂಕಾ (25) ಯುವತಿ ತನ್ನ ಊರಿಗೆ ಕೆಲ ದಿನಗಳ ಹಿಂದಷ್ಟೇ ಆಗಮಿಸಿದ್ದಳು. ಪ್ರಿಯಾಂಕಾಳ ತಲೆ ಹಾಗೂ ಕೈ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಅವರದೇ ಹೊಲದಲ್ಲಿಯೇ ಶವವನ್ನು ಬಿಸಾಡಲಾಗಿದೆ. ಈ ಭೀಕರ ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕೋಲ್ಕತ್ತಾ ಪೊಲೀಸರು ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ್ದ ಪ್ರಿಯಾಂಕ ಶೌಚಾಲಯಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ತೆರಳಿದ್ದಳಂತೆ, ಹೊರಗೆ ಹೋಗಿ ಎಷ್ಟು ಹೊತ್ತಾದರು ತಿರುಗಿ ವಾಪಸ್ ಬಂದಿರಲಿಲ್ಲ. ಇದರಿಂದ ಗಾಬರಿಗೊಂಡ ಆಕೆಯ ತಾಯಿ ತನ್ನ ಬಂಧುಗಳ ಜೊತೆ ಮನೆಯ ಅಕ್ಕಪಕ್ಕ ಹುಡುಕಾಡಿದರೂ ಪ್ರಿಯಾಂಕ ಸುಳಿವು ಸಿಕ್ಕಿರಲಿಲ್ಲ. ನಂತರ ಆಕೆಯ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಸಿಕ್ಕಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯಾವ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂಬ ಪತ್ತೆ ಕಾರ್ಯದಲ್ಲಿ ಕಾರ್ಯಚರಣೆಗೆ ಇಳಿದಿದ್ದಾರೆ. ಜೊತೆಗೆ ಆರೋಪಿಗಳ ಬಂದನಕ್ಕೆ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!