ದಾಬಸ್ ಪೇಟೆ: ಹೆಂಡತಿಯನ್ನು ಕೊಂದು ಬಾತ್ರೂಂನಲ್ಲಿ ಸುಟ್ಟುಹಾಕಿದ ಪತಿ.!
ಅಶ್ವಸೂರ್ಯ/ಶಿವಮೊಗ್ಗ: ನೆಲಮಂಗಲದಲ್ಲಿ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಪತ್ನಿಯನ್ನೆ ಕೊಲೆ ಮಾಡಿ ಪೆಟ್ರೋಲ್ ಸುರಿದು ಮನೆಯ ಬಾತ್ ರೂಮಿನಲ್ಲಿ ಸುಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಠಾಣೆಯ ಸರಹದ್ದಿನಲ್ಲಿ ನಡೆದಿದ್ದು ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.!
ಈ ಘಟನೆ ಮೂರು ದಿನಗಳ ಹಿಂದೆ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾವ್ಯ (27) ಮೃತ ಗೃಹಿಣಿ. ಈಕೆಯ ಶವ ಮನೆಯ ಬಾತ್ರೂಂನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು.
ಪತಿ ಶಿವಾನಂದ್ ಅಲಿಯಾಸ್ ದಿಲೀಪ್ ಮೂಲತಃ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಣಿಪುರ ಗ್ರಾಮದವನಾಗಿದ್ದು, ಕೊಲೆಯಾದ ಕಾವ್ಯ ಹಾಸಬ ಜಿಲ್ಲೆಯ ಹೊಳೆನರಸೀಪುರ ತಾಲೂಕು ಮಾವಿನಕೆರೆ ಗ್ರಾಮದವರು. ಇವರಿಬ್ಬರು ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು ಎಂದು ತಿಳುದು ಬಂದಿದೆ. ಇತ್ತೀಚೆಗೆ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿತ್ತು.
ಪತಿ ವಿಪರೀತವಾಗಿ ಮದ್ಯಪಾನ ಮಾಡುತ್ತಿದ್ದ. ಇದರಿಂದ ಇಬ್ಬರ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಮನೆಯ ಬಾತ್ ರೂಮ್ನಲ್ಲಿ ಪತ್ನಿಯನ್ನು ಕೊಲೆ ಮಾಡಿ ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಸುಟ್ಟಿರುವ ಆರೋಪಿ ಪತಿಯನ್ನು ದಾಬಸ್ ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾವ್ಯ ಮನೆಯವರು ಆಕೆಗೆ ಫೋನ್ ಮಾಡಿದ್ದಾರೆ. ಎಷ್ಟು ಬಾರಿ ಫೋನ್ ಮಾಡಿದರು ಫೋನ್ ತೆಗೆಯದ ಹಿನ್ನೆಲೆ ಮನೆಯವರು ಬಂದು ನೋಡಿದಾಗ ಮಗಳು ಸುಟ್ಟ ಸ್ಥಿತಿಯಲ್ಲಿ ಉಸಿರು ಚಲ್ಲಿರುವುದನ್ನು ಕಂಡು ಪೋಲಿಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲಿಸರು ದೂರು ದಾಖಲಿಸಿಕೊಂಡು ಆಕೆಯ ಪತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.