ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆಯಿಂದ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ಮೃತ ಮಹಿಳೆ ತೇಜಸ್ವಿನಿ ಎಲ್ ಸುಲಾಖೆ ಮತ್ತು ಈಕೆಯ ಎರಡೂವರೆ ವರ್ಷದ ಮಗ ವಿಹಾನ್

ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆಯಿಂದ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ಬೆಂಗಳೂರು: ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಮಹಿಳೆ ಮತ್ತು ಮಗು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ 10 ಕೋಟಿ ರೂ. ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದೆ.
ರಾಜ್ಯ ಸರ್ಕಾರ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮತ್ತು ಇತರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಅರ್ಜಿದಾರ ಲೋಹಿತ್‌ಕುಮಾರ ವಿ ಸುಲಾಖೆ ಅವರು 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಕಳೆದ
ಜನವರಿ 10 ರಂದು ನಾಗವಾರ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಬಿದ್ದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆ ತೇಜಸ್ವಿನಿ ಎಲ್ ಸುಲಾಖೆ (26) ಮತ್ತು ಈಕೆಯ ಎರಡೂವರೆ ವರ್ಷದ ಮಗ ವಿಹಾನ್ ಸಾವನ್ನಪ್ಪಿದ್ದರು‌. ಅ ಸಮಯದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್ ತಿಳಿಸಿತ್ತು.
ಅಮಾಯಕರ ಜೀವಕ್ಕೆ ಕೇವಲ 20 ಲಕ್ಷ ರೂಪಾಯಿ ಪರಿಹಾರ ಸಾಕಾಗುವುದಿಲ್ಲ ಎಂದು ಲೋಹಿತ್‌ಕುಮಾರ್ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದು, ಅವರ ಕುಟುಂಬಕ್ಕೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.



ಸುಧೀರ್ ವಿಧಾತ, ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!