ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿ ಅವರನ್ನು ಬಿಜೆಪಿಯ ವರಿಷ್ಠರು ಬಿಡುಗಡೆಗೊಳಿಸಿದ್ದಾರೆ.!
ಈ ಮೂಲಕ ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗಬಹುದೆಂದು ರಾಜ್ಯ ಬಿಜೆಪಿ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಇದೆ ಕಾರಣಕ್ಕೆ ಅವರನ್ನು ಬಿಡುಗಡೆಮಾಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.
2020ರ ಅಕ್ಟೋಬರ್ ತಿಂಗಳಲ್ಲಿ ಸಿ ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಈ ಹಿನ್ನಲೆ ಅವರು ಅಂದಿನ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಕೊಟ್ಟಂತಹ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ರವಿ ಜವಬ್ದಾರಿ ಇಂದಲೆ ನಿಭಾಯಿಸಿದ್ದರು.
ಹಾಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರದ ಅವಧಿ ಈಗಾಗಲೇ ಮುಗಿದಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರನ್ನು ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಬಿಜೆಪಿ ಕೂಡ ತೀರಾ ಹಿನ್ನಡೆ ಅನುಭವಿಸಿತು. ಈ ಕಾರಣದಿಂದಲೇ ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಕೂಗು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಕೇಂದ್ರ ಬಿಜೆಪಿ ನಾಯಕರು ತಿರ್ಮಾನಿಸಿರ ಬಹುದಾ.? ಎಂಬ ಪ್ರಶ್ನೆ ಉದ್ಭವವಾಗಿದೆ ಎಲ್ಲವನ್ನೂ ಕಾದು ನೋಡಬೇಕಿದೆ
ಸುಧೀರ್ ವಿಧಾತ, ಶಿವಮೊಗ್ಗ
Voice of common man in words