ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ, ಶ್ರೀ ಹಿತೇಂದ್ರ ಆರ್. ಐಪಿಎಸ್ ಮಾನ್ಯ ಎಡಿಜಿಪಿ

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ, ಶ್ರೀ ಹಿತೇಂದ್ರ ಆರ್. ಐಪಿಎಸ್ ಮಾನ್ಯ ಎಡಿಜಿಪಿ

ಅಶ್ವಸೂರ್ಯ/ಶಿವಮೊಗ್ಗ: ಆಗಸ್ಟ್, 02 ರಂದು ಶ್ರೀ ಹಿತೇಂದ್ರ ಆರ್. ಐಪಿಎಸ್ ಮಾನ್ಯ ಎಡಿಜಿಪಿ (ಕಾನೂನು & ಸುವ್ಯವಸ್ಥೆ) ರವರು ಬರಲಿರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದರು.

ನಂತರ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ವಿಮರ್ಶನಾ ಸಭೆ ನಡೆಸಿದರು, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯ ಬಂದೋಬಸ್ತ್ ವ್ಯವಸ್ಥೆ, ಗಣೇಶ ಪೆಂಡಾಲ್ ಮತ್ತು ಮೆರವಣಿಗೆ ಮಾರ್ಗ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆಮಾಡಿ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚಿಸಿದರು.

ಜೋತೆಗೆ ಕಿಡಿಗೇಡಿಗಳು ಹಾಗೂ ರೌಡಿ ಚಟುವಟಿಕೆಗಳ ಮೇಲೆ ನಿಗಾವಹಿಸುವಂತೆ ಸೂಚಿಸಿದರು, ಮತ್ತು ಯಾವುದೇ ಸಮಸ್ಯೆ , ತೊಂದರೆಯನ್ನುಂಟು ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಪ್ರಮುಖವಾಗಿ ಗಾಂಜಾ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಮಾಹಿತಿ ಕಲೆಹಾಕಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದರು,ಪ್ರತಿಯೊಬ್ಬ ಅಧಿಕಾರಿಗಳು ಮತ್ತು ಪೋಲಿಸರು ಉತ್ತಮ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ರಮೇಶ್, ಐಪಿಎಸ್, ಮಾನ್ಯ ಡಿಐಜಿಪಿ ಪೂರ್ವ ವಲಯ ದಾವಣಗೆರೆ, ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶ್ರೀ ಕೃಷ್ಣಮೂರ್ತಿ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಶಿವಮೊಗ್ಗ, ಶ್ರೀ ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ, ಶ್ರೀ ಸುರೇಶ್ ಎಂ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ,

ಶ್ರೀ ಗೋಪಾಲಕೃಷ್ಣ ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ, ಶ್ರೀ ನಾಗರಾಜ್, ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, ಶ್ರೀ ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ, ಶ್ರೀ ಗಜಾನನ ವಾಮನ ಸುತಾರ, ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ, ಶ್ರೀ ಕೃಷ್ಣಮೂರ್ತಿ, ಪೊಲೀಸ್ ಉಪಾಧೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ, ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!