ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ನಿಗೂಢ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಆರೋಪಿ!
ಅಶ್ವಸೂರ್ಯ/ಶಿವಮೊಗ್ಗ: ಕಲಬುರಗಿಯ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ತಾನು ಹನಿಟ್ರ್ಯಾಪ್ ಮಾಡಿ ಹಣ ತೆಗೆದುಕೊಂಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡು ವಿಡಿಯೋ ಬಿಡುಗಡೆ ಮಾಡಿದ್ದಾನೆ.!
ಕಲಬುರಗಿಯ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು. ಉದ್ಯಮಿಗಳು, ಅಧಿಕಾರಿಗಳು, ಪೊಲೀಸರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ, ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರಂತೆ ಖದೀಮರು.! ಇದೀಗ ಈ ಪ್ರಕರಣದ ಆರೋಪಿಯೊಬ್ಬ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ್ದಾನೆ.
ಆರೋಪಿ ಪ್ರಭು ಹಿರೇಮಠ್ ಎಂಬಾತ ನಾನು ಉದ್ಯಮಿ ಒಬ್ಬರಿಗೆ ಹನಿಟ್ರ್ಯಾಪ್ ಮಾಡಿ ಹಣ ಪಡೆದಿರುವುದು ನಿಜ ಎಂದಿದ್ದಾನೆ. ಉದ್ಯಮಿ ವಿನೋದ್ ಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದೇನೆ! ಅವರು 6 ಲಕ್ಷ ರೂಪಾಯಿ ನನ್ನ ಅಕೌಂಟಿಗೆ ಆರ್ ಟಿಜಿಎಸ್ ಮಾಡಿದ್ದಾರೆ. ಅದಾದ ಬಳಿಕ ನಮ್ಮ ಮಾವನ ಅಕೌಂಟ್ ಗೆ 8 ಲಕ್ಷ ಹಣ ಹಾಕಲಾಗಿದೆ.
ನನ್ನ ಅಕೌಂಟಿಗೆ ಹಣ ಹಾಕಿ ರಾಜು ಲೆಂಗಟಿ ಹಣ ಡ್ರಾ ಮಾಡಿಸಿಕೊಂಡಿದ್ದಾನೆ. ಆ ಹಣವನ್ನು ಸರ್ ಗೆ ಕೊಡಬೇಕು ಎಂದು ಹೇಳಿ ಹಣ ತೆಗೆದುಕೊಂಡು ಹೋಗಿದ್ದಾನೆ ಎಂದು ಆರೋಪಿ ಪ್ರಭು ಹಿರೇಮಠ್ ಹೇಳಿದ್ದಾನೆ.
ಸದ್ಯ ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮಾಯಕ ಯುವತಿಯರಿಗೆ ಕೆಲಸದ ಆಮಿಷವೊಡ್ಡುತ್ತಿದ್ದ ಕಿರಾತಕರ ಗ್ಯಾಂಗ್ ಯುವತಿಯರನ್ನು ಬಲವಂತದಿಂದ ಹನಿಟ್ರ್ಯಾಪ್ ಗೆ ಬಳಸಿಕೊಂಡು ಹಲವರಿಂದ ಹಣ ವಸೂಲಿ ಮಾಡುತ್ತಿದ್ದರು. ಎನ್ನುವುದು ಬಯಲಾಗಿದೆ.
ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಪೊಲೀಸರು, ಅಧಿಕಾರಿಗಳು, ಉದ್ಯಮಿಗಳು!
ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡುತಿದ್ದ ಗ್ಯಾಂಗ್ ಇವರುಗಳನ್ನು ಹನಿ ಟ್ರ್ಯಾಪ್ ಮೂಲಕ ಖೆಡ್ಡಾಗೆ ಕೆಡವಿಕೊಂಡು ಲಕ್ಷಗಟ್ಟಲೆ ಹಣ ವಸೂಲಿ ಮಾಡುತ್ತಿದ್ದರು.ಈ ಗ್ಯಾಂಗ್ ವಿರುದ್ಧ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ್ ರೆಡ್ಡಿ, ಮಂಜು ಭಂಡಾರಿ ಸೇರಿದತೆ 8 ಜನರ ವಿರುದ್ಧ ಹನಿಟ್ರ್ಯಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಿಸಿಕೊಂಡು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರಿಗೆ ಹಣದ ಆಮಿಷವೊಡ್ಡಿ, ಬಳಿಕ ಯುವತಿಯರನ್ನು ಹನಿಟ್ರ್ಯಾಪ್ ಗೆ ಬಳಸಿಕೊಳ್ಳುತ್ತಿದ್ದರಂತೆ!? ಹತ್ತಕ್ಕೂ ಹೆಚ್ಚು ಯುವತಿಯರನ್ನು ಈ ರೀತಿ ಬಳಸಿಕೊಂಡಿದ್ದಾರೆ ಎನ್ನಲಾಗಿದ್ದು ಇನ್ನಷ್ಟು ತನಿಖೆಯಿಂದ ಹೊರ ಬರಬೇಕಿದೆ. ಪ್ರತಿಷ್ಠಿತ ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳನ್ನು ಖೆಡ್ಡಕ್ಕೆ ಕೆಡವಿಕೊಂಡು ಫೋಟೊ, ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರಂತೆ! ಇದೇ ರೀತಿ ಆರೋಪಿಗಳು ಕಮಲಾಪುರ ಪೊಲೀಸ್ ಠಾಣೆಯ ಪೇದೆಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ, ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದರೆ ಎಂದರೆ ಇವರೆಂತ ಡೆಂಜರಸ್ ಎನ್ನುವುದನ್ನು ನೀವೆ ಯೋಚಿಸಿ? ಇದೇ ರೀತಿ ಉದ್ಯಮಿಯೊಬ್ಬರಿಂದ 40 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ. ಆರೋಪಿಗಳು ಓರ್ವ ಯುವತಿಗೆ ಗರ್ಭಪಾತವನ್ನೂ ಮಾಡಿದ್ದಾರಂತೆ! ಇದೀಗ 8 ಅರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.