BREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಕೇಂದ್ರದ ಐವರು GST ಅಧಿಕಾರಿಗಳ ಬಂಧನ!
ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರು ಪೊಲೀಸರ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಐವರು ಕೇಂದ್ರದ ಐವರು GST ಅಧಿಕಾರಿಗಳನ್ನು ಖೆಡ್ಡಕ್ಕೆ ಕೆಡವಿಕೊಂಡಿದ್ದಾರೆ!
ಉದ್ಯಮಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಸೇರಿದಂತೆ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ರೂಪಾಯಿ ಹಣ ಪಡೆದು ಅಧಿಕಾರಿಗಳು ಪರಾರಿಯಾಗಿದ್ದರಂತೆ! ಈ ಬಗ್ಗೆ ಉದ್ಯಮಿಯೊಬ್ಬರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬೆಂಗಳೂರು ನಗರ ಡಿಸಿಪಿ ದೇವರಾಜ್ & ಟಿಮ್ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಮುಂದಾಗಿದ್ದರು. ಇದೀಗ ಮಹಿಳಾ ಅಧಿಕಾರಿ ಸೇರಿದಂತೆ ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸುವಲ್ಲಿ ಯಶಸ್ಚಿಯಾಗಿದ್ದಾರೆ. ಈ ಪ್ರಕರಣದ ಮುಂದಿನ ತನಿಖೆಗಾಗಿ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.