ಬೆಳಗಾವಿ:ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ
ಅಶ್ವಸೂರ್ಯ/ಶಿವಮೊಗ್ಗ: ಇಂದು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ “ಲೋಗೋ ಅನಾವರಣ” ಹಾಗೂ “ದಾನಿಗಳಿಗೆ ಗೌರವ ಸಮರ್ಪಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಂತರ ಸರ್ಕಾರಿ ಶಾಲೆಗಳ ಜೀರ್ಣೋದ್ದಾರ ಹಾಗೂ ಕಲಿಕಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದ ದಾನಿಗಳಿಗೆ, ಬೆಳಗಾವಿ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತರಾದ ಶ್ರೀ ಅಶೋಕ್ ಸೇನ್ ಗುಪ್ತಾ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ದಾನಿಗಳಿಗೆ ರಾಜ್ಯ ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹೃದಯಪೂರ್ವಕ ವಂದನೆಗಳನ್ನು ವೇದಿಕೆಯ ಮೂಲಕ ತಿಳಿಸಲಾಯಿತು..
ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರುಗಳಾದ ಶ್ರೀ ವಿಠ್ಠಲ ಹಲಗೇಕರ್, ಶ್ರೀ ವಿಶ್ವಾಸ್ ವೈದ್ಯ, ಶ್ರೀ ಮಹಾಂತೇಶ್ ಕೌಜಲಗಿ, ಶ್ರೀ ಬಾಬಾಸಾಹೇಬ್ ಪಾಟೀಲ್, ಶ್ರೀ ಆಸೀಫ್ ಸೇಠ್, ಶ್ರೀ ನರೇಂದ್ರ ಸ್ವಾಮಿ, ಶ್ರೀ ಬಸವರಾಜ ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರಕಾಶ್ ಹುಕ್ಕೇರಿ,
ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ್ ರೋಷನ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಿತೇಶ್ ಕುಮಾರ್, ಜಿಲ್ಲಾ ಪಂಚಾಯತ್ CEO ಶ್ರೀ ರಾಹುಲ್ ಶಿಂಧೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.