ಶಿವಮೊಗ್ಗ: ಗ್ರಾಹಕರಿಗೆ ಕೋಟಿ ರೂಪಾಯಿ ವಂಚಿಸಿದ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆಗೆ ಶರಣು..!

ಶಿವಮೊಗ್ಗ: ಗ್ರಾಹಕರಿಗೆ ಕೋಟಿ ರೂಪಾಯಿ ವಂಚಿಸಿದ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆಗೆ ಶರಣು..!

ಅಶ್ವಸೂರ್ಯ/ಶಿವಮೊಗ್ಗ : ಒಂದು ಒಳ್ಳೆಯ ಕೆಲಸ ಕೈಯಲ್ಲಿದ್ದು ಸುಂದರ ಜೀವನ ನಡೆಸಬೇಕಾದ ಬ್ಯಾಂಕ್ ಉದ್ಯೋಗಿಯೊಬ್ಬ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿ ಕೋಟಿ ರೂಪಾಯಿ  ಲಪಟಾಯಿಸಿದ್ದ ಈತ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಆರಗದ ಸುನಿಲ್ (35 ವರ್ಷ) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸುನಿಲ್ ಕೆಲವು ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದನಂತೆ.!? ಹಣ ಲಪಟಾಯಿಸಿದ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಸಂಬಂದ ಸುನಿಲ್ ಜೈಲಿಗೂ ಹೋಗಿದ್ದ. ನಂತರ ಜಾಮೀನಿನ ಮೇಲೆ ಹೊರ ಬಂದಿದ್ದ ಈತ ಆನ್ಲೈನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ. ಆನ್ಲೈನ್ ವ್ಯವಹಾರ ನಡೆಸಿ ಹಣ ಕಳೆದುಕೊಂಡ ಸುನೀಲ್ ಕಳೆದ ಗುರುವಾರ ವಿಷ ಸೇವಿಸಿದ್ದ. ವಿಷಯ ತಿಳಿದ ಮನೆಯವರು ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!