ವೈಯಾಲಿಕಾವಲ್ ಮಹಿಳೆ ಹತ್ಯೆ ಕೇಸ್: ಪೊಲೀಸರ ಮುಂದೆ ಅಶ್ರಫ್ ಹೇಳಿದ್ದೇನು.?

ವೈಯಾಲಿಕಾವಲ್ ಮಹಿಳೆ ಹತ್ಯೆ ಕೇಸ್: ಪೊಲೀಸರ ಮುಂದೆ ಅಶ್ರಫ್ ಹೇಳಿದ್ದೇನು.?

ಅಶ್ವಸೂರ್ಯ/ಬೆಂಗಳೂರು: ಸಿಲಿಕಾನ್ ಸಿಟಿ ಜನತೆಯನ್ನು ಬೆಚ್ಚಿಬೀಳಿಸಿದ ಮಹಾಲಕ್ಷ್ಮಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ವೈಯಾಲಿಕಾವಲ್ ಪೊಲೀಸರು ಚುರುಕುಗೊಳಿಸಿದ್ದಾರೆ. ಅನುಮಾನಸ್ಪದ ವ್ಯಕ್ತಿಗಳನ್ನು ಕರೆತಂದು ವಿಚಾರಣೆ ಒಳಪಡಿಸುತ್ತಿದ್ದಾರೆ. ಅದರಲ್ಲೂ ಭೀಕರವಾಗಿ ಕೊಲೆಯಾಗಿರುವ ಮಹಾಲಕ್ಷ್ಮಿ ಪೋಷಕರು ಅನುಮಾನ ವ್ಯಕ್ತಪಡಿಸಿದ್ದವರನ್ನು ಕರೆತಂದು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದರೆ. ಪೋಷಕರು ಹಾಗೂ ಗಂಡ ಹೇಮಂತ್ ದಾಸ್ ಪ್ರಸ್ತಾಪಿಸಿದ್ದ ಸಲೂನ್ ಬಾಯ್ ಅಶ್ರಫ್ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. 

ಸಲೂನ್ ಬಾಯ್ ಅಶ್ರಫ್‌ನನ್ನು ಪೊಲೀಸರು ಒಂದು ಗಂಟೆಗಳ ಕಾಲ ತೀವ್ರ ವಿಚಾರಣೆ ಮಾಡಿದ್ದಾರೆ.
ಅಲ್ಲದೇ ಆತನ ಕಾಲ್ ಡಿಟೈಲ್ಸ್ ಹಾಗೂ ಇತ್ತೀಚಿನ ಚಲನವಲಗಳ ಬಗ್ಗೆ ಮಾಹಿತಿಪಡೆದುಕೊಂಡಿದ್ದಾರೆ. ನನಗೆ ಪರಿಚಯ ಇದಿದ್ದು ನಿಜ. ಆದರೆ ನಾನು ಕಳೆದ ಆರು ತಿಂಗಳಿನಿಂದ ಅವರ ಸಂಪರ್ಕದಲ್ಲಿ ಇಲ್ಲ ಎಂದು ಅಶ್ರಫ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಮಹಾಲಕ್ಷ್ಮಿ ಮರ್ಡರ್ ಕೇಸ್ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕಮಿಷನರ್

ವೈಯಾಲಿಕಾವಲ್ ನ ಮಹಾಲಕ್ಷ್ಮಿ ಮರ್ಡರ್ ಕೇಸಿಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಹತ್ವದ ಮಾಹಿತಿ ನೀಡಿದ್ದಾರೆ.
ವೈಯಾಲಿಕಾವಲ್ ನಲ್ಲಿ ಮಹಿಳೆಯ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಯಾರು ಎಂಬ ಸ್ಪಷ್ಟವಾದ ಮಾಹಿತಿ ನಮಗೆ ಸಿಕ್ಕಿದೆ. ಆತನನ್ನು ಪತ್ತೆ ಹಚ್ಚಿ ಬಂಧಿಸುವ ಕಾರ್ಯ ಪ್ರಗತಿಯಲ್ಲಿದೆ. ಹೀಗಾಗಿ ಶೀಘ್ರ ಆತನ ಬಂಧನವಾಗುತ್ತದೆ. ಬಂಧನವಾದ ನಂತರ ಆತನನ್ನು ಕೂಲಂಕುಷವಾಗಿ ವಿಚಾರಣೆ ಮಾಡಿ ಹೆಚ್ಚಿನ ಮಾಹಿತಿ ಕೊಡಬಹುದು. ಆತ ಹೊರ ರಾಜ್ಯದವನು ಎಂದು ಗೊತ್ತಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ವಾಸವಿದ್ದ. ಆತನ ಬಂಧನಕ್ಕಾಗಿ ನಾವು ಕಾರ್ಯಚರಣೆ ಮುಂದುವರೆಸಿದ್ದೇವೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬ ಮಹಿಳೆಯನ್ನು ಹತ್ಯೆ ಮಾಡಿ ಮೃತದೇಹವನ್ನು ತುಂಡರಿಸಿ ಫ್ರಿಡ್ಜ್ ನಲ್ಲಿಡಲಾಗಿತ್ತು. ಮೃತದೇಹ ಕೊಳೆತ ವಾಸನೆ ಬಂದಿದ್ದರಿಂದ ಅಕ್ಕಪಕ್ಕದ ನಿವಾಸಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಅದರಂತೆ ಕುಟುಂಬಸ್ಥರು ಬಂದು ನೋಡಿದಾಗ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಪೊಲೀಸರು ಮಹಾಲಕ್ಷ್ಮಿಯ ಜೊತೆಗೆ ಒಡನಾಟವಿದ್ದಂತವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಆಕೆಯ ಜೊತೆಗೆ ಆಪ್ತನಾಗಿದ್ದವನೇ ಮರ್ಡರ್ ಮಾಡಿದ್ದಾನೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನು ಹತ್ಯೆ ಮಾಡಿದ ಬಳಿಕ ಆಕೆಯ ಮೃತದೇಹವನ್ನಿಟ್ಟಿದ್ದ ಫ್ರಿಡ್ಜ್ ನ್ನು ಈಗ ಎಫ್ಎಸ್ಎಲ್ ವರದಿಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

Optimized by Optimole
error: Content is protected !!