ಶಿವಮೊಗ್ಗ: ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ
ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಈ ಕೆಳಕಂಡ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.
- ಶಿವಮೊಗ್ಗ-ಶಿಕಾರಿಪುರ- ರಾಣೇಬೆನ್ನೂರು ಹೊಸ ರೈಲು ಮಾರ್ಗದ ಕಾಮಗಾರಿ ಕುರಿತು.
- ಕೋಟೆಗಂಗೂರು ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಕಾಮಗಾರಿ ಕುರಿತು.
- ಭದ್ರಾವತಿ ಬಳಿಯ ಕಡದಕಟ್ಟೆ ಎಲ್.ಸಿ 34 ರಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ಕುರಿತು.
- ಶಿವಮೊಗ್ಗ-ಬೀರೂರು ದ್ವಿಪಥ ರೈಲ್ವೇ ಹಳಿ ನಿರ್ಮಾಣ ಮಾಡುವ ಕುರಿತು.
- ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ VIP Lounge ಮೇಲ್ದರ್ಜೆಗೆರಿಸುವ ಕುರಿತು.
- ವಿದ್ಯಾನಗರ ರೈಲ್ವೇ ಸ್ಟೇಷನ್ ಬಳಿ ರೈಲ್ವೇ ಕೆಳ ಸೇತುವೆ ನಿರ್ಮಾಣ ಮಾಡುವ ಕುರಿತು.
- ಅಮೃತ್ ಭಾರತ್ ಯೋಜನೆಯಡಿ ರೈಲ್ವೇ ನಿಲ್ದಾಣಗಳ ಅಭಿವೃದ್ಧಿಗೆ ವೇಗ ನೀಡುವ ಕುರಿತು.
- ಯಶವಂತಪುರ-ಶಿವಮೊಗ್ಗ ಮಾರ್ಗದಲ್ಲಿ ವಂದೇ ಭಾರತ್ ರೈಲು ಪರಿಚಯಿಸುವ ಕುರಿತು.
- ಶಿವಮೊಗ್ಗ-ರೇಣಿಗುಂಟಾ-ಚೆನ್ನೈ ಮಾರ್ಗ ಮತ್ತೊಮ್ಮೆ ಪರಿಚಯಿಸುವ ಕುರಿತು.
ಸೇರಿದಂತೆ ಜಿಲ್ಲೆಯ ಆರ್ಥಿಕತೆಗೆ ವೇಗ ನೀಡಲು ಹಾಗೂ ಉದ್ಯೋಗಾವಕಾಶ ಹೆಚ್ಚಿಸಲು ಮತ್ತು ಪ್ರವಾಸೋದ್ಯಮಕ್ಕೆ ಬಲ ತುಂಬುವ ಇನ್ನೂ ಅನೇಕ ಭವಿಷ್ಯದ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ತೆರೆದಿಟ್ಟು ಅಗತ್ಯ ಅನುದಾನ ಒದಗಿಸುವಂತೆ ಮನವಿ ಮಾಡಲಾಯಿತು.