ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹೊರವಲಯದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಮಂಗಳವಾರ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಈ ಬಸ್ ನಲ್ಲಿ ಶಿಕ್ಷಕರು ಸೇರಿದಂತೆ 44 ಜನರಿದ್ದರು.
ಬ್ಯಾಂಕಾಕ್ ನಲ್ಲಿ ಶಾಲಾ ಬಸ್ಸಿಗೆ ಬೆಂಕಿ ಶಿಕ್ಷಕರು ಸೇರಿ 25 ವಿದ್ಯಾರ್ಥಿಗಳು ಸಜೀವ ದಹನ..!
ಅಶ್ವಸೂರ್ಯ/ಶಿವಮೊಗ್ಗ : ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನ ಹೊರವಲಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಶಿಕ್ಷಕರು ವಿದ್ಯಾರ್ಥಿಗಳು ಸೇರಿ 25 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.!
ಈ ಘಟನೆಯಲ್ಲಿ 16 ಮಂದಿ ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಸೂರಿಯಾ ಜುವಾಂಗ್ರುಂಗ್ಕಿಟ್ ಹೇಳಿದ್ದಾರೆ.
ಗಾಯಾಳುಗಳು ಮತ್ತು ಮೃತರ ಸಂಖ್ಯೆಯನ್ನು ತಕ್ಷಣಕ್ಕೆ ಖಚಿತಪಡಿಸಲು ಸಾಧ್ಯವಾಗುತ್ತಿಲ್ಲ. ಮೂಲಗಳ ಪ್ರಕಾರ 25 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ತಿಳಿಸಿದ್ದಾರೆ.
ಬಸ್ಸಿಗೆ ಬೆಂಕಿ ತಗುಲಿದ ಪರಿಣಾಮ ಘಟನಾ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.ಈ ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.