ಆರೋಪಿ ಅಶ್ವಥ್ ಹೆಬ್ಬಾರ್
ಬೆಳ್ತಂಗಡಿಯಲ್ಲಿ ಶಿಕ್ಷಕಿಯನ್ನು ಬೆದರಿಸಿ ಒಂದು ಲಕ್ಷ ರೂಪಾಯಿ ಹಣವನ್ನು ಸುಲಿಗೆಮಾಡಲು ಮುಂದಾಗಿದ್ದ ಕಿರಾತಕನ ಬಂಧನ
ಬೆಳ್ತಂಗಡಿ, ಆ.3: ಸಾಮಾಜಿಕ ಜಾಲತಾಣ ‘ಟೆಲಿಗ್ರಾಂ’ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ಡೀಲ್ ಮಾಡಲು ಮುಂದಾಗಿದ್ದ ಈತ ಹಣಕ್ಕಾಗಿ ಬೇಡಿಕೆ ಇಟ್ಟದ್ದು ಅಮಾಯಕ ಶಿಕ್ಷಕಿಯನ್ನು ಬೆದರಿಸಿ ಒಂದು ಲಕ್ಷ ರೂ ವಸೂಲಿಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ವೇಣೂರು ಪೊಲೀಸರು ಆರೋಪಿಯನ್ನು ಸೆರೆ ಹಿಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿಯಾಗಿದ್ದಾನೆಘಟನೆಯ ವಿವರ
ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಎಂಬವರಿಗೆ ಬೆದರಿಸಿ ಮೂರು ಲಕ್ಷ ರೂ. ನೀಡುವಂತೆ ಟೆಲಿಗ್ರಾಂ ನಕಲಿ ಖಾತೆಯ ಮೂಲಕ ವ್ಯಕ್ತಿಯೋರ್ವ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದೆ ಹೋದರೆ ನಿನ್ನ ಪತಿಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದನಂತೆ.! ಈ ಬಗ್ಗೆ ಶಿಕ್ಷಕಿ ಜ್ಯೋತಿ ವೇಣೂರು ಠಾಣೆಗೆ ತೆರಳಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯಾ ಜೆ. ನೇತೃತ್ವದ ತಂಡ ಆರೋಪಿಯ ಪತ್ತೆಗೆ ತಕ್ಷಣವೇ ಮುಂದಾಗಿ ಕಾರ್ಯಾಚರಣೆಗಿಳಿದಿದ್ದಾರೆ
ಪೊಲೀಸರ ಪ್ಲಾನ್ ನಂತೆ ಜ್ಯೋತಿ ಒಂದು ಲಕ್ಷ ರೂ. ನೀಡುವುದಾಗಿ ಆರೋಪಿಗೆ ಟೆಲಿಗ್ರಾಂ ಸಂದೇಶ ಕಳುಹಿಸಿದ್ದಾರೆ. ಅದರಂತೆ ಆರೋಪಿ ಬುಧವಾರ ಸಂಜೆ ಅಳದಂಗಡಿ ಕೆದ್ದು ಸಮೀಪ ಹಣ ಎಸೆದು ಹೋಗುವಂತೆ ಸೂಚಿಸಿದ್ದ. ಬಳಿಕ ಅಲ್ಲಿ ಬೇಡ ಎಂದು ಮತ್ತೊಮ್ಮೆ ಸಂದೇಶ ರವಾನಿಸಿ ಬೇರೊಂದು ಸ್ಥಳ ಸೂಚಿಸಿದ್ದಾನೆ. ಹೀಗೆ ಪದೆ ಪದೆ ಮೂರರಿಂದ ನಾಲ್ಕುಬಾರಿ ಸ್ಥಳವನ್ನು ಬದಲಾಯಿ ಸುತ್ತಾ ಮೆಸೇಜ್ ಮಾಡುತ್ತಿದ್ದ ಆರೋಪಿ ಕೊನೆಯದಾಗಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಎಸೆದು ಹೋಗುವಂತೆ ಸೂಚಿಸಿದ್ದಾನೆನ್ನಲಾಗಿದೆ. ಅದರಂತೆ ಜ್ಯೋತಿ ಹಣದ ಕಟ್ಟನ್ನು ಎಸೆದು ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಹಣವನ್ನು ಹೆಕ್ಕಿಕೊಳ್ಳುತ್ತಿದ್ದಂತೆ ಮೊದಲೇ ಕಾದು ಕುಳಿತಿದ್ದ ಪೊಲೀಸರು ಆತನನ್ನು ಹಿಡಿಯಲು ಅಟ್ಯಾಕ್ ಮಾಡಿದ್ದಾರೆ ಮೊದಲೇ ಕ್ರಿಮಿನಲ್ ಹಣ ಪಡೆದವನೇ ಪೋಲಿಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ದ್ವಿಚಕ್ರ ವಾಹನದಲ್ಲಿ ಎಸ್ಕೇಪ್ ಆಗಿದ್ದ ಆದರೆ ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನನ್ನು ಗುಂಡೇರಿ ಸಮೀಪ ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಆರೋಪಿಯಿಂದ ಒಂದು ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಸುಧೀರ್ ವಿಧಾತ, ಶಿವಮೊಗ್ಗ