ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ಮತ್ತು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ.
ಅಶ್ವಸೂರ್ಯ/ನವದೆಹಲಿ: ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ 1 ಹಂತದಲ್ಲಿ 288 ಕ್ಷೇತ್ರಗಳಿಗೆ ನವೆಂಬರ್ 20 ರಂದು ವಿಧಾನಸಭೆಗೆ ಮತದಾನ ನಡೆಯಲಿದೆ. ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ 81 ಕ್ಷೇತ್ರಗಳಿಗೆ ನವೆಂಬರ್ 13 ರಂದು ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನ ನವೆಂಬರ್ 20 ರಂದು ನಿಗದಿಯಾಗಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ
ಇದೇ ವೇಳೆ ಇತ್ತೀಚೆಗೆ ಪೂರ್ಣಗೊಂಡ ಹರ್ಯಾಣದ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ಉಪಚುನಾವಣೆಗಳು ಇಲ್ಲ ಎಂದು ಮುಖ್ಯ ಆಯುಕ್ತರು ಘೋಷಿಸಿದ್ದಾರೆ.
ಇದೇ ವೇಳೆ ನಮ್ಮ ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶಾಸಕರಿಂದ ತೆರವುಗೊಂಡ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. ನ.13 ರಂದು ಮತದಾನ ನಡೆಯಲಿದೆ