ಶಿವಮೊಗ್ಗ ಜೈಲಿನಿಂದ ಮೊಬೈಲ್ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ.!
ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ಕೇಂದ್ರ ಕಾರಾಗೃಹ ಮತ್ತೆ ಸುದ್ದಿಯಾಗಿದೆ.! ಜೈಲಿನಲ್ಲಿ ಈಗಲೂ ಮೊಬೈಲ್ ಸಿಗುತ್ತದೆ ಎಂಬ ಆರೋಪಗಳಿಗೆ ಮತ್ತೊಂದು ಪ್ರಕರಣ ಪುಷ್ಠಿ ನೀಡಿದೆ.!ಶಿವಮೊಗ್ಗ ನಗರದಿಂದ ಕೂಗಳತೆ ದೂರದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ತನ್ನ ಪತ್ನಿಗೆ ಕರೆಮಾಡಿದ್ದಾನೆ ಎನ್ನುವ ಸುದ್ದಿ ವರದಿಯಾಗಿದೆ. ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿರುವುದರ ಜೋತೆಗೆ ಹಣಕ್ಕಾಗಿ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬ ದೂರು ನೀಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಜೈಲಿನಿಂದ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿರುವ ಕೈದಿ ನಾಗರಾಜ ತನ್ನ ಪತ್ನಿಗೆ ಜೈಲಿನಿಂದಲೇ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.
2024ರ ಮಾರ್ಚ್ ತಿಂಗಳಿಂದ ಹಲವು ಬಾರಿ ಕರೆ ಮಾಡಿ ಒಂದು ಸಾವಿರ, ಎರಡು ಸಾವಿರದಂತೆ ಹಣ ಹಾಕುವಂತೆ ಒತ್ತಾಯಿಸುತ್ತಿದ್ದಾನೆ.
ಹಣ ಹಾಕದಿದ್ದಲ್ಲಿ ಜೈಲಿನಿಂದ ಹೊರ ಬಂದ ನಂತರ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ಆತನ ಪತ್ನಿ ದೂರು ನೀಡಿದ್ದಾರೆ. ಆರೋಪ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಬೆನ್ನಲ್ಲೇ ಶಿವಮೊಗ್ಗ ಪೊಲೀಸರು ಜೈಲಿನ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಮೊಬೈಲ್ ಚಾರ್ಜರ್ಗಳು ಕೆಲವು ವಸ್ತುಗಳು ಪತ್ತೆಯಾಗಿದ್ದವು