ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಿಗೆ ಗನ್ ತೋರಿಸಿದ ಪಿಸ್ತೂಲ್ ತೋರಿಸಿದ 13 ಮಂದಿ ಅರೇಸ್ಟ್!

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಿಗೆ ಗನ್ ತೋರಿಸಿದ ಪಿಸ್ತೂಲ್ ತೋರಿಸಿದ 13 ಮಂದಿ ಅರೇಸ್ಟ್!

ಅಶ್ವಸೂರ್ಯ/ಕುಂದಾಪುರ: ತಮ್ಮ ಮನೆಯ ಸಮೀಪ ಗೆಳೆಯರೊಂದಿಗೆ ಮಾತನಾಡುತ್ತಾ ನಿಂತಿದ್ದ ಸಮಯಕ್ಕೆ ಸರಿಯಾಗಿ ಮಾರಕಾಸ್ತ್ರಗಳೊಂದಿಗೆ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತವರ ಗೆಳೆಯರಿಗೆ ಗನ್ ತೋರಿಸಿ ಬೆದರಿಕೆಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಪ್ರಕರಣದ ಆರೋಪಿಗಳಾದ

ವಿಶಾಲ್, ಗೌತಮ್, ರಾಹುಲ್, ಸಂತೋಷ್ ನಾಡ, ಮಹೇಂದ್ರ, ಜಗದೀಶ್ ಮೊಗವೀರ, ಸಂತೋಷ್ ಹಡವು, ಅಂಕಿತ್ ಪೂಜಾರಿ, ಸಾರ್ಥಕ್, ಶಿವರಾಜ್, ಸಾಧನ್, ಸಚಿನ್ ಪೂಜಾರಿ ಆಲೂರು, ಶರತ್ ದೇವಾಡಿಗ ಆಲೂರು, ವಿಶ್ವನಾಥ ಪಡುಕೋಣೆ, ರೋಶನ್ ಫೆರ್ನಾಂಡೀಸ್, ಪ್ರದೀಪ್ ಪಡುಕೋಣೆ, ಕಾರ್ತಿಕ್ ಪೂಜಾರಿ, ಪ್ರಕಾಶ್ ಮೊಗವೀರ, ಕೀರ್ತಿಕ್ ಪೂಜಾರಿ, ಗಣೇಶ್ ಪೂಜಾರಿ, ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ ಪೊಲೀಸರು ಈ ಆರೋಪಿಗಳಲ್ಲಿ ಆಲೂರು ಹೊಯ್ಯಾಣ ನಿವಾಸಿ ಸಚಿನ್ (24), ಆಲೂರು ರಾಮೇಶ್ವರ ನಗರ ನಿವಾಸಿ ಶರತ್ ದೇವಾಡಿಗ (24), ಕೆಂಬೈಲು ನಿವಾಸಿಗಳಾದ ಕಾರ್ತಿಕ್ (22), ಹಾಗೂ ಕೀರ್ತಿಕ್ (20), ಪಡುಕೋಣೆ ನಿವಾಸಿ ಪ್ರಕಾಶ್ (20), ಪಡುಕೋಣೆಯ ಹನುಮಂತನಗರ ನಿವಾಸಿ ಜಗದೀಶ್ (31), ಪಡುಕೋಣೆ ರಾಮಮಂದಿರ ನಿವಾಸಿ ಗೌತಮ್ (23), ಪಡುಕೋಣೆ ನಿವಾಸಿ ಮಹೇಂದ್ರ ಪೂಜಾರಿ, ಹಡವು ನಿವಾಸಿ ಸಂತೋಷ್ ಮೊಗವೀರ, ರೋಶನ್ ಫೆರ್ನಾಂಡೀಸ್, ಆಲೂರು ನಿವಾಸಿ ಪ್ರಸಾದ್ ಆಚಾರ್ಯ (30) ಸೇರಿದಂತೆ ಒಟ್ಟು 13 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದ್ದಾರೆ.

ಬಂಧಿತ ಆರೋಪಿಗಳಿಂದ 1 ಏರ್‌ಪಿಸ್ತೂಲ್, 4 ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಘಟನೆಯ ಹಿನ್ನೆಲೆ: ಪಡುಕೋಣೆ ನಿವಾಸಿ ಶ್ರೀಕಾಂತ ಪೂಜಾರಿ ಹಡವು ಗ್ರಾಮದ ಶ್ರೀಮಹಾವಿಷ್ಣು ದೇವಸ್ಥಾನಕ್ಕೆ ಹೋಗುವ ಕ್ರಾಸ್ ಬಳಿ ಸಂಜೆ ಸ್ನೇಹಿತರಾದ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಚಂದ್ರ ಪಡುಮನೆ, ಸುರೇಶ್, ಶಿವಕುಮಾರ್ ಹೆಬ್ಬಾರ್ ಮತ್ತವರ ಮಗ ಮನು ಹೆಬ್ಬಾರ್, ಸುದೇಶ್ ಶೆಟ್ಟಿ ಜೊತೆಯಲ್ಲಿ ಮಾತನಾಡುತ್ತಾ ನಿಂತಿದ್ದರಂತೆ.ಈ ವೇಳೆಯಲ್ಲಿ ಆರೋಪಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಆರೋಪಿ ಸಚಿನ್ ಪೂಜಾರಿ, ಶರತ್ ಸೇರಿದಂತೆ ಆರೋಪಿಗಳ ತಂಡ ಪಿಸ್ತೂಲ್, ಕಬ್ಬಿಣದ ಪೈಪ್‌ಗೆ ತುದಿಯಲ್ಲಿ ಹಲ್ಲುಗಳುಳ್ಳ ಚಕ್ರ ಇರುವ ಆಯುಧ, ಕಬ್ಬಿಣದ ರಾಡ್, ಮರದ ತುಂಡು ಇನ್ನಿತರ ಮಾರಕಾಸ್ತ್ರಗಳನ್ನು ಹಿಡಿದು ಬೆದರಿಕೆಯೊಡ್ಡಲು ಮುಂದಾಗಿದ್ದಾರೆ. ಶ್ರೀಕಾಂತ್ ಹಾಗೂ ಸ್ನೇಹಿತರು ಅಲ್ಲೆ ಸ್ವಲ್ಪ ದೂರ ಹೋಗಿ ನಿಂತಿದ್ದು, ಶಿವಕುಮಾರ್ ಹೆಬ್ಬಾರ್ ಹಾಗೂ ಅವರ ಮಗ ಮನು ಆರೋಪಿ ಗಳನ್ನು ಎದುರಿಸಲು ಹೋದಾಗ ಅವರಿಗೆ ಆರೋಪಿ ವಿಶ್ವನಾಥ ಪಡುಕೋಣೆ, ರೋಶನ್ ಫೆರ್ನಾಂಡಿಸ್, ಪ್ರವೀಣ ಪಡುಕೋಣೆ ತಮ್ಮಲ್ಲಿದ್ದ ಮಾರಕಾಸ್ತ್ರಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಪರಿಣಾಮ ಶಿವಕುಮಾರ್ ಹೆಬ್ಬಾರ್ ಕೈ ಕಾಲಿಗೆ ಹಾಗೂ ಮನು ಹೆಬ್ಬಾರ್ ತಲೆಗೆ ಗಾಯಗಳಾಗಿದೆ.


ಸುದೇಶ್ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಅವರಿಗೂ ಆರೋಪಿ ಸಚಿನ್ ಪೂಜಾರಿ ನೀವು ಗಲಾಟೆ ಮಾಡಲು ಬಂದವರಾ? ಇದು ಲೈಸನ್ಸ್ ಇಲ್ಲದೇ ಇರುವ ಪಿಸ್ತೂಲ್. ನಿಮ್ಮನ್ನು ಕೊಂದು, ಪಿಸ್ತೂಲ್ ಬಿಸಾಕಿ ಹೋಗುತ್ತೇನೆ. ಯಾರಿಂದಲೂ ಏನೂ ಮಾಡಲು ಆಗೋದಿಲ್ಲ. ಗಲಾಟೆ ಮಾಡುವುದಿದ್ದರೇ ನಿಮಗೆ ಈಗಲೇ ಶೂಟ್ ಮಾಡಿ ಸಾಯಿಸುವುದಾಗಿ ಪಿಸ್ತೂಲ್ ತಲೆಗೆ ಹಿಡಿದು ಜೀವ ಬೆದರಿಕೆ ಹಾಕಿದ್ದಾನೆ.! ಜೀವಭಯದಿಂದ ಶ್ರೀಕಾಂತ ಓಡಲೆತ್ನಿಸಿದಾಗ ಆರೋಪಿ ಸಚಿನ್ ಪೂಜಾರಿ ಅಡ್ಡಗಟ್ಟಿ ತನ್ನ ಕೈಯಲ್ಲಿದ್ದ ಪಿಸ್ತೂಲ್ ಅನ್ನು ಶ್ರೀಕಾಂತ್ ತಲೆಗೆ ಗುರಿ ಹಿಡಿದು ಶೂಟ್ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೇ ಕೈಯಿಂದ ಕೆನ್ನೆ, ತಲೆಗೆ ಹೊಡೆದು ಹಲ್ಲೆ ಮಾಡಿದ್ದಾನೆ. ಎಂದು ಶ್ರೀಕಾಂತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಶ್ರೀಕಾಂತ್ ಹಾಗೂ ಆರೋಪಿ ವಿಶ್ವನಾಥ್ ಪಡುಕೋಣೆ ಹಾಗೂ ಇತರರ ಮಧ್ಯೆ ಹಳೆಯ ದ್ವೇಷವಿದ್ದು, ಅದೇ ದ್ವೇಷದಿಂದ ಈ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ್, ಅಪರಾಧ ವಿಭಾಗದ ಪಿಎಸ್‌ಐ ಬಸವರಾಜ್ ಕನಶೆಟ್ಟಿ, ಸಿಬ್ಬಂದಿ ಗಳಾದ ನಾಗರಾಜ್, ಕೇಶವ, ಸಂದೀಪ್, ರಾಘವೇಂದ್ರ, ರಾಷ್ಟ್ರಪತಿ, ಚಾಲಕ ಸುಧೀರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಇನ್ನಷ್ಟು ತನಿಖೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!