ಪರಿಣಾಮಕಾರಿ ಮಿಷನ್‌ ಇಂಧ್ರಧನುಷ್‌ 5.0 ಚಾಲನಾ ಕಾರ್ಯಕ್ರಮ

ಶಿವಮೊಗ್ಗ, ಆಗಸ್ಟ್‌ 05 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಸಹಯೋಗದಲ್ಲಿ ಆ.07 ರ ಬೆಳಗ್ಗೆ 10:30 ಕ್ಕೆ ನಗರದ ಹೊಸಮನೆ ದೊಡಮ್ಮ ದೇವಸ್ಥಾನ ಅಂಗನವಾಡಿ ಕೇಂದ್ರದಲ್ಲಿ ಪರಿಣಾಮಕಾರಿ ಮಿಷನ್‌ ಇಂಧ್ರಧನುಷ್‌ 5.0 ಚಾಲನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ವಿಧಾನ ಸಭಾ ಕ್ಷೇತ್ರ ಶಾನಸಕರಾದ ಎಸ್‌.ಎನ್‌ ಚನ್ನಬಸಪ್ಪ ಇವರು ನೆರವೇರಿಸುವರು. ಮಹಾನಗರ ಪಾಲಿಕೆ ಮಹಾಪೌರರಾದ ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಉಪ ಮಹಾಪೌರರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆಸ್ಪತ್ರೆ ಮೆಗ್ಗಾನ್‌ ಬೋಧನಾ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು, ವಿ.ಡಿ.ಎಲ್‌ ಉಪನಿರ್ದೇಶಕರು, ಜಿಲ್ಲಾ ತರಬೇತಿ ಕೇಂದ್ರ ಪ್ರಾಂಶುಪಾಲರು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Leave a Reply

Your email address will not be published. Required fields are marked *

Optimized by Optimole
error: Content is protected !!