ಮಂಗಳೂರು/ ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ

ಮಂಗಳೂರು/ ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ

ಅಶ್ವಸೂರ್ಯ/ ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಬಳಿಯ ರಾಜ್‌ಟೈಲ್ಸ್ ಫ್ಯಾಕ್ಟರಿಯಲ್ಲಿ ಕಳೆದ ಮೂರು ವರ್ಷದ ಹಿಂದೆ ಜಾರ್ಖಂಡ್ ಮೂಲದ ಕುಟುಂಬಕ್ಕೆ ಸೇರಿದ ಎಂಟು ವರ್ಷ ಪ್ರಾಯದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ದ.ಕ. ಜಿಲ್ಲಾ ವಿಶೇಷ ಪೊಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರಾಜ್‌ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿದ್ದ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಪನಾಯಿ ತೆಪ್ಪಿಲ್ ನಿವಾಸಿ ಜಯಸಿಂಗ್ ಆದಿವಾಸಿ (21) ಮತ್ತು ಮುಕೇಶ್ ಸಿಂಗ್ (20) ಹಾಗೂ ಜಾರ್ಖಂಡ್ ರಾಜ್ಯದ ರಾಂಚಿ ಜಿಲ್ಲೆಯ ಮನೀಶ್ ತಿರ್ಕಿ (33) ಮರಣದಂಡನೆ ಶಿಕ್ಷೆಗೆ ಒಳಗಾದ ಆರೋಪಿಗಳು.
ಉಳಾಯಿಬೆಟ್ಟು ರಾಜ್ ಟೈಲ್ಸ್‌ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಕುಟುಂಬದ ಎಂಟು ವರ್ಷ ಪ್ರಾಯದ ಬಾಲಕಿಯು 2021ರ ನ.20ರಂದು ಸಂಜೆಯ ವೇಳೆಗೆ ಕಾಣೆಯಾಗಿದ್ದಳು.! ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸ್ಥಳಿಯರ ಜೊತೆಗೆ ಬಾಲಕಿಯ ಪೋಷಕರು ಹುಡುಕಾಟ ನಡೆಸಿದಾಗ ರಾತ್ರಿ ವೇಳೆ ಫ್ಯಾಕ್ಟರಿ ಹಿಂಭಾಗದ ಚರಂಡಿಯಲ್ಲಿ ಬಾಲಕಿಯ ಮೃತದೇಹಹವು ಪತ್ತೆಯಾಗಿತ್ತು. ಬಾಲಕಿಯನ್ನು ಫ್ಯಾಕ್ಟರಿಯಲ್ಲಿದ್ದವರೇ ಅತ್ಯಾಚಾರಗೈದು ಕೊಲೆಗೈದಿದ್ದ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.ಅದೇ ಸಮಯಕ್ಕೆ ಕ್ರೈಮ್ ಮಾಡಿದ ಶಂಕಿತ ಆರೋಪಿಗಳು ಎಸ್ಕೇಪ್ ಆಗಿದ್ದರೂ.ಅ ನಂತರದ ಪೊಲೀಸರ ಕಾರ್ಯಚರಣೆಯಲ್ಲಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಜಯ್‌ ಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕೆ ಕೃತ್ಯ ಈ ಪ್ರಕರಣದ ಆರೋಪಿಗಳಾಗಿದ್ದರೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಮುನೀಮ್ ಸಿಂಗ್ ಆರೋಪಿಗಳಿಗೆ ಸಹಕಾರ ನೀಡಿದ್ದ.

ಅಂದು ರವಿವಾರ ಶಾಲೆಗೆ ರಜೆಯಿದ್ದ ಕಾರಣ ಟೈಲ್ಸ್ ಫ್ಯಾಕ್ಟರಿಯ ಹೊರಗಡೆ ಆಟವಾಡುತ್ತಿದ್ದ ಬಾಲಕಿಯನ್ನು ಚಾಕ್ಲೆಟ್ ಕೊಡಿಸುವ ಆಮಿಷವೊಡ್ಡಿದ ಆರೋಪಿಗಳು ಕಟ್ಟಿಗೆಯನ್ನು ರಾಶಿ ಹಾಕಿದ್ದ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಬಾಲಕಿಯ ಕುತ್ತಿಗೆ ಹಿಚುಕಿ ಕೊಲೆ ಮಾಡಿದ್ದರು.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ಜಾನ್ಸನ್ ಡಿಸೋಜ ನೇತೃತ್ವದ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 30 ಸಾಕ್ಷಿಗಳು, 75 ದಾಖಲೆಗಳನ್ನು ಪರಿಗಣಿಸಿ ಮೂವರು ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ 1.20 ಲಕ್ಷ ರೂಪಾಯಿ ದಂಡ ತೆರುವಂತೆ ನ್ಯಾಯಾಧೀಶರಾದ ಮಾನು ಕೆ.ಎಸ್. ತೀರ್ಪು ನೀಡಿದ್ದಾರೆ.
ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ ಜಾಮೀನಿನಲ್ಲಿ ಹೊರಬಂದು ತಲೆಮರೆಸಿ ಕೊಂಡಿದ್ದಾನೆ. ಹಾಗಾಗಿ ಆತನಿಗೆ ಶಿಕ್ಷೆ ಸದ್ಯ ವಿಧಿಸಲಾಗಿಲ್ಲ.
ದಂಡ ಪ್ರಕ್ರಿಯೆ ಸಂಹಿತೆ ಕಲಂ 357(ಎ) ಪ್ರಕಾರ ಮತ್ತು ಸಂಸ್ತಸ್ತರ ಪರಿಹಾರ ಯೋಜನೆಯಡಿ ಮೃತ ಬಾಲಕಿಯ ತಾಯಿಗೆ ಹೆಚ್ಚುವರಿಯಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 3.80 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.

ಆರಂಭದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣ ಸ್ವಾಮಿ ಸಂತ್ರಸ್ತರ ಪರವಾಗಿ ವಾದ ಮಂಡಿಸಿದ್ದರು. ಬಳಿಕ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಬದರಿನಾಥ ನಾಯರಿ ವಾದ ಮಂಡಿಸಿದ್ದರು.
ಒಟ್ಟಿನಲ್ಲಿ ಮುಗ್ದ ಬಾಕಿಯನ್ನು ಅತ್ಯಾಚಾರ ಮಾಡಿ ಹತ್ಯೆಮಾಡಿದ ಹಂತಕರಿಗೆ ಸರಿಯಾದ ಶಿಕ್ಷೆ ನೀಡಿ ಕೋರ್ಟ್ ತೀರ್ಪು ನೀಡಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!