ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ
ಅಶ್ವಸೂರ್ಯ/ಶಿವಮೊಗ್ಗ: ಇಂದು ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.
ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಂದಿಗೆ ಸಂವಾದ ನಡೆಸಲಾಯಿತು. ಈ ಯೋಜನೆಯಿಂದಾಗಿ ಹೆಚ್ಚಿನ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
ಮೊದಲ ಹಂತದಲ್ಲಿ 25,000 ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಲಾಗಿದ್ದು, ಪರಿಣಿತ ಉಪನ್ಯಾಸಕರಿಂದ ಪ್ರತಿದಿನ ಈ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ. ಪದವಿ ಪೂರ್ವ ಕಾಲೇಜಿನ 20 ಸಾವಿರ ವಿದ್ಯಾರ್ಥಿಗಳು ಹಾಗೂ ಆದರ್ಶ ಕಾಲೇಜಿನ 5 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರಾದ ಶ್ರೀಮತಿ ಸಿಂಧೂ ಬಿ ರೂಪೇಶ್, ಪೇಸ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಪ್ರವೀಣ್ ತ್ಯಾಗಿ, ಪದವಿ ಪೂರ್ವ ಜಂಟಿ ನಿರ್ದೇಶಕರಾದ ಶ್ರೀಮತಿ ಡಾ.ರೂಪಶ್ರೀ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.