ಉಪ ಚುನಾವಣೆಯ ಮೂರು ಕ್ಷೇತ್ರದಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು
ಸತತ ಮೂರನೇ ಬಾರಿಗೆ ಸೋಲುಂಡ ನಿಖಿಲ್ ಕುಮಾರಸ್ವಾಮಿ! ಗೆಲುವಿನ ನಗೆ ಬಿರಿದ ಸೈನಿಕ !
ಅಶ್ವಸೂರ್ಯ/ಶಿವಮೊಗ್ಗ: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಕ್ಷೇತ್ರದಲ್ಲಿ ಉಪ ಚುಣಾವಣೆಯ ರಣ ಕಹಳೆ ಮೊಳಗಿತ್ತು, ಚುನಾವಣೆ ನೆಡೆದು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
ಇತ್ತೀಚೆಗಷ್ಟೆ ಬಿಜೆಪಿ ಪಕ್ಷವನ್ನು ತೊರೆದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದರು. ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದ ಯೋಗೇಶ್ವರ್ ಇದೀಗ ವಿಧಾನಸಭಾ ಉಪಚುಣಾವಣೆಯಲ್ಲಿ ಗೆದ್ದು ಬೀಗಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿ.ಪಿ ಯೋಗೇಶ್ವರ್ ವಿರುದ್ದ ಸ್ಫರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಇದೀಗ ಮೂರನೇ ಬಾರಿಗೆ ಸೋಲುಂಡಿದ್ದಾರೆ, ಬಿಜೆಪಿ ಪಕ್ಷದಿಂದ ಹೊರಬಂದು ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಸಿ.ಪಿ. ಯೋಗೇಶ್ವರ್ ಚೆನ್ನಪಟ್ಟಣದಲ್ಲಿ ಗೆಲ್ಲುವುದು ಕಷ್ಟ ಎಂದು ಹೇಲಲಾಗುತ್ತಿತ್ತು, ನಿಖಿಲ್ ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎನ್ನುವ ನಿರೀಕ್ಷೆ ಎಲ್ಲರಲ್ಲೂ ಹೆಚ್ಚಾಗಿಯೇ ಇತ್ತು. ಆದರೆ ಈ ನಿರೀಕ್ಷೆ ಇದೀಗ ಹುಸಿಯಾಗಿದೆ.
ನಿಖಿಲ್ ಕುಮಾರಸ್ವಾಮಿ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎನ್ನುವ ಸುದ್ದಿ ಸಿಕ್ಕಪಟ್ಟೆ ಸದ್ದು ಮಾಡಿತ್ತು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಚುನಾವಣೆ ಫಲಿತಾಂಶ ಹೊರಬರುವ ಮುಂಚೆಯೇ ನಿಖಿಲ್ ಕುಮಾರಸ್ವಾಮಿ ಅವರೆ ಈ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎನ್ನುವ ನಿರೀಕ್ಷೆಯಿಂದ ಸಂಭ್ರಮವನ್ನು ಆಚರಿಸಿದ್ದರು, ಆದರೆ ಇದೀಗ ಈ ನಿರೀಕ್ಷೆಗಳು ಬುಡಮೇಲಾಗಿದೆ!. ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆಲುವಿನ ನಗೆ ಬೀರಿದ್ದಾರೆ.
ಇದೀಗ ಈ ಸೋಲಿನೊಂದಿಗೆ ನಿಖಿಲ್ ಕುಮಾರಸ್ವಾಮಿ ಮೂರನೆ ಭಾರಿಗೆ ಹೀನಾಯ ಸೋಲು ಅನುಭಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಬಾರಿ ಅಂತರದ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ
ಬಳ್ಳಾರಿ: ಎಸ್.ಟಿ ಮೀಸಲು ಕ್ಷೇತ್ರವಾದ ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಅನ್ನಪೂರ್ಣ ಗೆಲುವು ಸಾಧಿಸಿದೆ. ಸಂಸದ ತುಕರಾಂ ಅವರ ಪತ್ನಿ ಅನ್ನಪೂರ್ಣ ಅವರು ಗೆಲುವಿನೊಂದಿಗೆ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.
ಸಂಡೂರು ವಿಧಾನಸಭೆ ಎಸ್‌ಟಿ ಮೀಸಲು ಕ್ಷೇತ್ರಕ್ಕೆ ನ.13ರಂದು ಮತದಾನ ನಡೆದಿದ್ದು, ಹಕ್ಕು ಚಲಾಯಿಸಿರುವ ಕ್ಷೇತ್ರದ ಮತದಾರರು, ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರಪಡಿಸಿದ್ದರು. ಚುನಾವಣೆ ಅಖಾಡದಲ್ಲಿ ಪಕ್ಷೇತರರು ಸೇರಿ ಆರು ಅಭ್ಯರ್ಥಿಗಳು ಕಣದಲ್ಲಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಡುವೆ ನೇರ ಹಣಾಹಣಿಯೊಂದಿಗೆ ಫೈಟ್ ಏರ್ಪಟ್ಟಿತ್ತು.
ಉಭಯ ಪಕ್ಷಗಳ ಹಾಲಿ, ಮಾಜಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಡಿ.ಕೆ. ಶಿವಕುಮಾರ್, ಸೇರಿದಂತೆ ಹಲವಾರು ಪ್ರಬಲ ಮುಖಂಡರು ಸಂಡೂರು ಕ್ಷೇತ್ರದಲ್ಲಿ ಬೀಡುಬಿಟ್ಟು, ತಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರು. ಕೈ-ಕಮಲ ಪಕ್ಷಗಳ ನಡುವಿನ ಬಿಗ್ ಫೈಟ್‌ಗೆ ಕಾರಣವಾಗಿತ್ತು.
ಉಪ ಚುನಾವಣೆಯಲ್ಲಿ ಕೈ-ಕಮಲ ಪಕ್ಷಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿತ್ತು. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರನ್ನು ಗೆಲ್ಲಿಸುವ ಜವಾಬ್ದಾರಿ ಹಾಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ತುಕಾರಾಂ ವಹಿಸಿಕೊಂಡಿದ್ದರು.
ಪಕ್ಷದ ಮುಖಂಡರಲ್ಲಿ ಭುಗಿಲೆದ್ದಿದ್ದ ಒಂದೇ ಕುಟುಂಬಕ್ಕೆ ಟಿಕೆಟ್ ಎಂಬ ಅಸಮಾಧಾನವನ್ನು ಸಚಿವ ಸಂತೋಷ್‌ಲಾಡ್ ಶಮನಗೊಳಿಸಿದ್ದರೂ ಬೂದಿಮುಚ್ಚಿದ ಕೆಂಡದಂತಿತ್ತು. ಆದರೆ ಇದು ಮತದಾನದಲ್ಲಿ ಯಾವುದೇ ಪರಿಣಾಮ ಬೀರಿಲ್ಲ.
ಇನ್ನು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಶಾಸಕ ಜಿ. ಜನಾರ್ಧನರೆಡ್ಡಿಗೆ ವಹಿಸಲಾಗಿತ್ತು. ಆದರೆ ಬಿಜೆಪಿಯ ಯಾವುದೇ ಗೇಮ್ ಪ್ಲಾನ್ ವರ್ಕ್ ಔಟ್ ಆಗದೆ ಚುನಾವಣೆಯಲ್ಲಿ ಪರಿಣಾಮ ಬಿರದೆ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರನ್ನು ಗೆಲ್ಲಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು: ಬಿಜೆಪಿ ಅಭ್ಯರ್ಥಿಗೆ ಭರತ್ ಬೊಮ್ಮಾಯಿಗೆ ಸೋಲು
ಶಿಗ್ಗಾಂವಿ: ತೀವ್ರ ಜಿದ್ದಾಜಿದ್ದಿನ ಅಖಾಡದಲ್ಲಿ ಒಂದಾಗಿದ್ದ ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 83,400 ಮತಗಳನ್ನು ಪಡೆದುಕೊಂಡಿದ್ದು, 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲಿಗೆ ಶರಣಾಗಿದ್ದಾರೆ.