ಬೆಂಗಳೂರಿನಲ್ಲಿ ದುರಂತ ಅಂತ್ಯ ಕಂಡ ಯುವತಿ.! ಅಸ್ಸಾಂ ಮೂಲದ ಪ್ರೇಯಸಿಯನ್ನು ಕೊಂದು ಕೇರಳ ಮೂಲದ ಪ್ರೇಮಿ ಎಸ್ಕೇಪ್.!
ಅಶ್ವಸೂರ್ಯ/ಬೆಂಗಳೂರು: ಬೆಂಗಳೂರಿನಲ್ಲಿ ಕೇರಳದ ಮೂಲದ ಯುವಕ ಮತ್ತು ಅಸ್ಸಾಂ ಮೂಲದ ಯುವತಿ ನಡುವಿನ ಪ್ರೇಮಕಥೆ ಯುವತಿಯ ಹತ್ಯೆಯೊಂದಿಗೆ ದುರಂತ ಅಂತ್ಯ ಕಂಡಿದೆ.! ಯುವಕ ತನ್ನ ಪ್ರೇಯಸಿಯನ್ನು ಚೂರಿಯಿಂದ ಇರಿದುಕೊಂದು ಪರಾರಿಯಾಗಿದ್ದಾನೆ. ಈ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದ್ದು, ಮೂರು ದಿನಗಳ ನಂತರ ಬೆಳಕಿಗೆ ಬಂದಿದೆ.
ಉದ್ಯಾನ ನಗರಿ ಬೆಂಗಳೂರಿಗೆ ಉದ್ಯೋಗ ಅರಸಿಕೊಂಡು ಬಂದು ವಾಸವಾಗಿದ್ದ ಕೇರಳ ಮೂಲದ ಯುವಕ ಹಾಗೂ ಅಸ್ಸಾಂ ಮೂಲದ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರೀತಿಗೆ ಬಿದ್ದಿದ್ದಾರೆ. ಆದರೆ ಇಬ್ಬರೂ ಒಟ್ಟಿಗೆ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಯುವಕನೇ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ ಪರಾರಿ ಆಗಿರುವ ಘಟನೆ ನಡೆದಿದೆದೆ.
ಬೆಂಗಳೂರಿನ ಇಂದಿರಾನಗರ ರಾಯಲ್ ಲಿವಿಂಗ್ ಅಪಾರ್ಟ್ಮೆಂಟ್ ಅಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಕಳೆದ 3 ದಿನಗಳ ಹಿಂದೆಯೇ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವತಿ ಮಾಯಾ ಅಸ್ಸಾಂ ರಾಜ್ಯದವಳಾಗಿದ್ದಾರೆ. ಇನ್ನು ಕೊಲೆ ಮಾಡಿದ ಆರೋಪಿ ಆರವ್ ಅನಾಯ್ ಕೇರಳ ಮೂಲದವನಾಗಿದ್ದಾನೆ. ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಇಬ್ಬರ ಪರಿಚಯವಾಗಿ ಸ್ನೇಹ ಪ್ರೀತಿಗೆ ಜಾರಿದೆ ನಂತರ ಇನ್ನು ಇಬ್ಬರೂ ಮನೆಯನ್ನು ಬಿಟ್ಟು ಒಬ್ಬಂಟಿಯಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ನಗರದ ವಿವಿಧೆಡೆ ಸುತ್ತಾಡಿದ್ದಾರೆ.
ನಂತರ ಕಳೆದ ನಾಲ್ಕೈದು ದಿನಗಳ ಹಿಂದೆ ಇಂದಿರಾನಗರದ ದಿ ರಾಯಲ್ ಲಿವಿಂಗ್ ಎಂಬ ಅಪಾರ್ಟ್‌ಮೆಂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಇದ್ದರು. ಆದರೆ, ಕಳೆದ ಮೂರು ದಿನಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಆಗ ಇಬ್ಬರ ನಡುವೆ ಜಗಳ ವಾಗಿರಬಹುದು ಈ ವೇಳೆ ಪ್ರೇಮಿ ಆರವ್ ತನ್ನ ಪ್ರೇಯಸಿ ಮಾಯಾಗೆ ಚಾಕುವಿನಿಂದ ಇರಿದು ಹತ್ಯೆಮಾಡಿದ್ದಾನೆ ನಂತ ಅಲ್ಲಿಂದ ಪರಾರಿ ಆಗಿದ್ದಾನೆ. ಈ ಕೊಲೆ ನಡೆದು ಮೂರು ದಿನಗಳ ನಂತರ ಮನೆಯಿಂದ ದುರ್ವಾಸನೆ ಬಂದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದಾಗ ಯುವತಿಯ ಹತ್ಯೆಯ ವಿಷಯ ಬಯಲಾಗಿದೆ.ಹಂತಕ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವು ಪೊಲೀಸರಿಗೆ ತಿಳಿದಿದೆ. ಪೊಲೀಸರು ಸ್ಥಳ ಪರಿಶೀಲನೆ ಮಾಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ದೂರು ದಾಖಲಿಸಿಕೊಂಡ ಸುಬ್ರಮಣ್ಯ ಪುರ ಠಾಣೆಯ ಪೊಲೀಸರು ಹಂತಕನ ಬಂಧನಕ್ಕೆ ಭಲೇ ಬಿಸಿದ್ದಾರೆ.