Headlines

ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗದಿಂದ ಅದ್ದೂರಿ ಸ್ವಾಗತ..

ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗದಿಂದ ಅದ್ದೂರಿ ಸ್ವಾಗತ..

ಅಶ್ವಸೂರ್ಯ/ಶಿವಮೊಗ್ಗ: ರಾಜ್ಯ ಸರ್ಕಾರದ ಜನಪ್ರಿಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಆರ್.ದಿನೇಶ್ ಗುಂಡೂರಾವ್ ಕಳೆದ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಕೆಲವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ನಗರದ ಏರ್ ಪೋರ್ಟ್ ಗೆ ಆಗಮಿಸಿದ ಸಂದರ್ಭದಲ್ಲಿ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಅವರ ಸಾವಿರಾರು ಅಭಿಮಾನಿಗಳು ಮತ್ತು ಮಿತ್ರ ಬಳಗದಿಂದ ಅದ್ಧೂರಿಯಾಗಿ ಬೈಕ್ ರ್ಯಾಲಿ ಮುಖಾಂತರ ನಗರಕ್ಕೆ ಕರೆದುಕೊಂಡು ಬಂದು ಸ್ವಾಗತಿಸಲಾಯಿತು.

ಬಿ.ಹೆಚ್.ರಸ್ತೆ ಮಾರ್ಗವಾಗಿ ಬೈಕ್ ರ್ಯಾಲಿ ನಡೆಸಲಾಯಿತು. ಈ ಭವ್ಯವಾದ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರುಗಳು,ಕಾರ್ಯಕರ್ತರು,ಹೆಚ್.ಎಸ್.ಸುಂದರೇಶ್ ಅಭಿಮಾನಿಗಳು, ಆತ್ಮೀಯ ಬಳಗದವರು ಅಚ್ಚುಕಟ್ಟಾಗಿ ಮೆರವಣಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!