ಹಾಸನದ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್
ಅಪಘಾತದಲ್ಲಿ ಸಾವು.!
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ. ಹರ್ಷವರ್ಧನ್ (25) . ಮೃತ ದುರ್ದೈವಿ.
ಅಶ್ವಸೂರ್ಯ/ಶಿವಮೊಗ್ಗ: ಹಾಸನದ ಸಮೀಪ ಪ್ರೊಬೆಷನರಿ
ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಉಸಿರು ಚಲ್ಲಿದ್ದಾರೆ.! ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ರಸ್ತೆ ಬದಿಗೆ ಉರುಳಿ ಬಿದ್ದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ ದಾರುಣ ಘಟನೆ ಹಾಸನ ತಾಲೂಕಿನ ಕಿತ್ತಾನೆಗಡಿ ಸಮೀಪ ನೆಡೆದಿದೆ.!
ಹರ್ಷವರ್ಧನ್ (25) .ಮೃತ ದುರ್ದೈವಿಯಾಗಿದ್ದು ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನಕ್ಕೆ ಹೋಗಿ ಕರ್ತವ್ಯಕ್ಕೆ ಹಾಜರಾಗಲು ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಗ್ರಾಮದ ಸಮೀಪ ಸಂಜೆ 4.ಗಂಟೆಯ ಸುಮಾರಿಗೆ ಅವರು ಚಲಿಸುತ್ತಿದ್ದ ಜೀಪಿನ ಟೈರ್ ಸ್ಫೋಟಗೊಂಡಿದೆ.ಸ್ಫೋಟದ ರಭಸಕ್ಕೆ ಜೀಪ್ ಮೂರು ಸುತ್ತು ಉರುಳಿ ಛಿದ್ರವಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಹರ್ಷವರ್ಧನ್ ತಲೆಗೆ ಹಾಗೂ ದೇಹದ ಇನ್ನಿತರ ಭಾಗಕ್ಕೆ ತೀವ್ರವಾಗಿ ಗಾಯವಾಗಿತ್ತು ಜೊತೆಗೆ
ಜೀಪ್ ಚಾಲಕ ಮಂಜೇಗೌಡರಿಗೂ ಗಾಯಗಳಾಗಿದ್ದು ತಕ್ಷಣವೇ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮೈಸೂರಿನ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿಗಳನ್ನು ಭೇಟಿಯಾಗಿದ್ದ ಹರ್ಷವರ್ಧನ್ ಕರ್ತವ್ಯಕ್ಕೆ ಸಂಬಂದಿಸಿದಂತೆ ಮಾತುಕತೆ ನಡೆಸಿ ಹಾಸನ ಕಡೆಗೆ ಹೊರಟಿದ್ದರು. ಈ ವೇಳೆ ಹರ್ಷವರ್ಧನ್ ಅವರಿಗೆ ಹಿರಿಯ ಅಧಿಕಾರಿಗಳು ಶುಭಕೋರಿ ಕಳುಹಿಸಿದ್ದರಂತೆ. ಮಧ್ಯಪ್ರದೇಶ ಮೂಲದ ಹರ್ಷವರ್ಧನ್ ಅಧಿಕಾರ ಸ್ವೀಕಾರಕ್ಕಾಗಿ ಮೈಸೂರಿನಿಂದ ಬೊಲೆರೋ ಜಿಪ್ ನಲ್ಲಿ ಹಾಸನ ಕಡೆಗೆ ಹೊರಟಿದ್ದಾರು. ಹರ್ಷರ್ಧನ್ ಸಾವಿನ ಸುದ್ದಿಯನ್ನು ಆಸ್ಪತ್ರೆ ಮುಖ್ಯಸ್ಥ ಡಾ.ಬಷೀರ್ ಸ್ಪಷ್ಟಪಡಿಸಿದ್ದಾರೆ.
ಕಿತ್ತಾನೆ ಗ್ರಾಮದಲ್ಲಿ ಅಪಘಾತದ ಮಾಹಿತಿ ಸಿಗುತ್ತಿದ್ದಂತೆ ಹಾಸನ ಎಸ್ಪಿ ಮೊಹಮದ್ ಸುಜಿತಾ, ಎಎಸ್ಪಿಗಳಾದ ತಮ್ಮಯ್ಯ, ವೆಂಕಟೇಶ ನಾಯ್ಡು ಕೂಡಲೇ ಸ್ಥಳಕ್ಕೆ ಆಗಮಿಸಿ. ತೀವ್ರವಾಗಿ ಗಾಯಗೊಂಡಿದ್ದ ಹರ್ಷವರ್ಧನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಹಾಸನ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು. ಪೊಲೀಸ್ ಅಧಿಕಾರಿಗಳ ತಂಡ ಆಸ್ಪತ್ರೆಯಲ್ಲಿ ಜಮಾಯಿಸಿದ್ದರು. ವೈದ್ಯರ ತಂಡದ ಸಮಾಲೋಚನೆ ನಡೆಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸರು ಚರ್ಚಿಸಿದ್ದರು.
ಹರ್ಷವರ್ಧನ್ ಅವರಿಗೆ ವೈದ್ಯರು ನಿರಂತರ ಚಿಕಿತ್ಸೆ ನೀಡಿದರು ಪರಿಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶೂನ್ಯ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಬಗ್ಗೆ ಚರ್ಚಿಸಲಾಗಿತ್ತು ಆಂಬ್ಯುಲೆನ್ಸ್ ಕೂಡ ರೆಡಿಯಾಗಿತ್ತು .ಎಷ್ಟೇ ಪ್ರಯತ್ನ ಮಾಡಿದರೂ ವಿಧಿಯ ಆಟವೆ ಬೇರೆಯಾಗಿತ್ತು ಹರ್ಷವರ್ಧನ್ ಇನ್ನೇನು ಐಪಿಎಸ್ ಅಧಿಕಾರಿಯಾಗಿ ಹಾಸನದ ರಕ್ಷಣಾ ಅಧಿಕಾರಿಯವರಲ್ಲಿ ರಿಪೋರ್ಟ್ ಮಾಡಿಕೊಳ್ಳುವ ಮುನ್ನವೇ ವಿಧಿಯ ಕ್ರೂರ ನರ್ತನಕ್ಕೆ ಬಲಿಯಾಗಿ ಕೊನೆ ಉಸಿರು ಬಿಟ್ಟಿದ್ದಾರೆ.
ಮೂಲತಃ ಬಿಹಾರದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾಜಿಲ್ಲೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಪಡೆದು 2022-23 ರ ಐಪಿಎಸ್ ಬ್ಯಾಚ್ ನಲ್ಲಿ ತೇರ್ಗಡೆ ಹೊಂದಿದ್ದ ಇವರು ಕರ್ನಾಟಕ ಕೇಡರ್ ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲ ತಿಳಿಸಿದೆ.ಈ ದುರ್ಟಘನೆ ಬಗ್ಗೆ ನೊಂದ ಸಂಪೂರ್ಣ ಪೋಲಿಸ್ ಇಲಾಖೆ ಸಂತಾಪ ಸೂಚಿಸಿದೆ.
ಕರ್ನಾಟಕದ ಮಣ್ಣಿನಲಿ ಒಬ್ಬ ಖಡಕ್ ಐಪಿಎಸ್ ಅಧಿಕಾರಿಯಾಗಿ ರೂಪುಗೊಳ್ಳಬೇಕಾಗಿದ್ದ ಹರ್ಷವರ್ಧನ್ ಕರ್ತವ್ಯಕ್ಕೆ ಹಾಜರಾಗುವ ಮುನ್ನವೆ ಸಾವಿನ ಮನೆ ಸೇರಿದ್ದು ಮಾತ್ರ ದುರಂತವೆ ಹೌದು.!ಈ ಸಾವು ನ್ಯಾಯವೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡಿದೆ…