ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ಉದ್ಘಾಟನಾ ಕಾರ್ಯಕ್ರಮ
ಅಶ್ವಸೂರ್ಯ/ಶಿವಮೊಗ್ಗ: ಇಂದು ( ಡಿ, 04 ) ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ರ ಉದ್ಘಾಟನಾ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ರವರು ಕ್ರೀಡಾಂಗಣದಲ್ಲಿ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಬಂದಂತಹ ಜಿಲ್ಲೆ ಪೊಲೀಸ್ ಕ್ರೀಡಾ ಪಟುಗಳಿಗೂ,ನೆರೆದಿದ್ದ ಕ್ರೀಡಾಭಿಮಾನಿಗಳಿಗು ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಸ್ವಾಗತ ಕೋರಿದರು. ಶ್ರೀ ಹೇಮಂತ್ ಎನ್, ಐಎಎಸ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರು ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಗೌರವ ರಕ್ಷೆಯನ್ನು ಸ್ವೀಕರಿಸುವುದರ ಜೋತೆಗೆ ಪಥ ಸಂಚಲನವನ್ನು ವೀಕ್ಷಿಸಿ ಕ್ರೀಡಾಕೂಡಕ್ಕೆ ಚಾಲನೆ ನೀಡಿದರು,ಶಿವಮೊಗ್ಗ ಜಿಲ್ಲಾ ಪೊಲೀಸ್ ಕ್ರೀಡಾಕೂಟದ ಕುರಿತು ಮಾತನಾಡಿದರು.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ವರ್ಷ ಪೂರ್ತಿ ಒತ್ತಡದಲ್ಲಿ ಕೆಲಸ ನಿರ್ವಹಿಸುವುದರಿಂದ, ಒತ್ತಡ ನಿರ್ವಹಣೆಯು ಅವಶ್ಯಕವಾಗಿರುತ್ತದೆ. ಉತ್ತಮ ಹವ್ಯಾಸಗಳಲ್ಲಿ ಹಾಗೂ ಕ್ರೀಡೆಯಲ್ಲಿ ನಿಯಮಿತವಾಗಿ ತೊಡಗಿಕೊಳ್ಳುವ ಮೂಲಕ ಒತ್ತಡ ನಿರ್ವಹಣೆ ಮಾಡಲು ಸಾಧ್ಯವಿರುತ್ತದೆ.
ಪೊಲೀಸ್ ಇಲಾಖೆಯು ಶಿಸ್ತುಭದ್ಧ ಇಲಾಖೆಯಾಗಿದ್ದು, ಅಧಿಕಾರಿ ಮತ್ತು ಸಿಬ್ಬಂಧಿಗಳು ಒಟ್ಟಿಗೆ ಒಂದು ತಂಡವಾಗಿ ಆಡುವ ಮೂಲಕ ಎಲ್ಲರೂ ಬೆರೆಯಲು, ಮುಕ್ತ ಸಂವಹನ ನಡೆಸಲು ಹಾಗೂ ಉತ್ತಮ ಭಾಂದವ್ಯ ಬೆಸೆಯಲು ಈ ಕ್ರೀಡಾ ಕೂಟದ ಮೂಲಕ ಸಾಧ್ಯವಿದ್ದು, ಇದರಿಂದ ಅಧಿಕಾರಿ ಸಿಬ್ಬಂಧಿಗಳ ದೈನಂದಿನ ಕೆಲಸ ಕಾರ್ಯಗಳ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಕ್ರೀಡೆಯಲ್ಲಿ ಕೇವಲ ದೈಹಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ಸಹಾ ತೊಡಗಿ ಕೊಳ್ಳುವುದು ಮುಖ್ಯವಿರುತ್ತದೆ. ಹಾಗೂ ಕ್ರೀಡೆ ಎಂದ ಮೇಲೆ ಸೋಲು ಮತ್ತು ಗೆಲವು ಸಾಮಾನ್ಯವಾಗಿದ್ದು, ಎಲ್ಲರೂ ಕ್ರೀ ಮನೋಭಾವದಿಂದ ಭಾಗವಹಿಸಿ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ಕ್ರೀಡಾ ಕೂಟಗಳು ವ್ಯಕ್ತಿಯಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇರುವ ಉತ್ತಮ ವೇಧಿಕೆಯೂ ಸಹಾ ಆಗಿರುತ್ತದೆ. ಆದ್ದರಿಂದ ಎಲ್ಲರೂ ಕ್ರೀಡಾ ಸ್ಪೂರ್ತಿ ಮತ್ತು ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸುವ ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದು ಶುಭಕೋರಿದರು.
ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಎಸ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ, ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ, ಶ್ರೀ ನಾಗರಾಜ್, ಡಿವೈಎಸ್ಪಿ ಭದ್ರಾವತಿ ಉಪ ವಿಭಾಗ, ಶ್ರೀ ಬಾಬು ಆಂಜನಪ್ಪ, ಡಿವೈಎಸ್ಪಿ, ಶಿವಮೊಗ್ಗ-ಎ ಉಪ ವಿಭಾಗ, ಶ್ರೀ ಸುರೇಶ್ ಕುಮಾರ್, ಡಿವೈಎಸ್ಪಿ, ಶಿವಮೊಗ್ಗ-ಬಿ ಉಪ ವಿಭಾಗ. ಶ್ರೀ ಗಜಾನನ ವಾಮನ ಸುತರ, ಡಿವೈಎಸ್ಪಿ, ತೀರ್ಥಹಳ್ಳಿ ಉಪ ವಿಭಾಗ. ಮತ್ತು ಶ್ರೀ ಕೃಷ್ಣಮೂರ್ತಿ, ಡಿವೈಎಸ್ಪಿ ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂಧಿಗಳು ಅವರ ಕುಟುಂಬದವರು ಉಪಸ್ಥಿತರಿದ್ದರು.