ನವದೆಹಲಿ : ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ.!
ಅಶ್ವಸೂರ್ಯ/ನವದೆಹಲಿ: ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ದಹಲಿಯ ನೆಬ್ ಸರಾಯ್ ನಲ್ಲಿ ನಡೆದಿದ್ದು, ಈ ಕುರಿತು ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೃತರನ್ನು ಮನೆಯ ಯಜಮಾನ ರಾಜೇಶ್ (53), ಪತ್ನಿ ಕೋಮಲ್ (47) ಮತ್ತು ಮಗಳು ಕವಿತಾ(23) ಎಂದು ಗುರುತಿಸಲಾಗಿದ್ದು ಮಾಹಿತಿಗಳ ಪ್ರಕಾರ,
ರಾಜೇಶ್ ಅವರ ಪುತ್ರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮನೆಯಿಂದ ವಾಕಿಂಗ್ ಗೆ ಹೊರ ಹೋಗಿದ್ದರು. ವಾಕಿಂಗ್ ಮುಗಿಸಿ ಅವರು ಮನೆಗೆ ವಾಪಸ್ ಬಂದಾಗ ತಂದೆ, ತಾಯಿ ಮತ್ತು ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮತ್ತು ವಿಧಿವಿಜ್ಞಾನ ತಂಡದವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಹಂತಕರನ್ನು ಪತ್ತೆಹಚ್ಚಲು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ದರೋಡೆ, ಕೌಟುಂಬಿಕ ಕಲಹ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು ಇನ್ನಷ್ಟು ಮಾಹಿತಿ ಪೊಲೀಸರ ತನಿಖೆಯ ನಂತರ ತಿಳಿದು ಬರಬೇಕಿದೆ.