ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :NIA ತಂಡದಿಂದ ರಾಜ್ಯದ 16 ಸ್ಥಳಗಳಲ್ಲಿ ತೀವ್ರ ಶೋಧ.!
ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು 2022ರ ಜು.26ರಂದು ರಾತ್ರಿ 8 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಪ್ರಕರಣದ ತನಿಖೆಗೆ ಆರಂಭದಲ್ಲಿ ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿತ್ತು. ಬಳಿಕ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 19 ಆರೋಪಿಗಳ ಬಂಧನ ಕೂಡಾ ಆಗಿದೆ. ಇದೀಗ ತನಿಖೆಯ ಮುಂದುವರಿದ ಭಾಗವಾಗಿ ಎನ್ಐಎ ಇಂದು ರಾಜ್ಯದ 16 ಕಡೆಗಳಲ್ಲಿ ದಾಳಿ ನಡೆಸಿದೆ.
ಅಶ್ವಸೂರ್ಯ/ಶಿವಮೊಗ್ಗ : ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕರ್ನಾಟಕದ ಹದಿನಾರು ಸ್ಥಳಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2022ರ ಜುಲೈನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಪ್ರವೀಣ್ ನೆಟ್ಟಾರು ಅವರು ರಾತ್ರಿ ತಮ್ಮ ಚಿಕನ್ ಸ್ಟಾಲ್ ಬಾಗಿಲು ಮುಚ್ಚಿ ಮನೆಗೆ ತೆರಳುವ ಸಂಧರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಡು ರಸ್ತೆಯಲ್ಲೆ ಕೊಲೆ ಮಾಡಿದ್ದರು.ಈ ಪ್ರಕರಣದ ತನಿಖೆ ನೆಡೆಸುತ್ತಿರುವ ಎಎನ್ಐ ತಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ 16 ಸ್ಥಳಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಐಎ ಆಗಸ್ಟ್ 4, 2022 ರಂದು ಸ್ಥಳೀಯ ಪೊಲೀಸರಿಂದ ತನಿಖೆಯನ್ನು ತಾವು ವಹಿಸಿಕೊಂಡಿದ್ದರು. ಮತ್ತು ಜನವರಿ 2023 ರಲ್ಲಿ 21 ಆರೋಪಿಗಳ ವಿರುದ್ಧ ಚಾರ್ಜ್’ಶೀಟ್ ಸಲ್ಲಿಸಿತ್ತು. ಒಟ್ಟಿನಲ್ಲಿ ಈ ಪ್ರಕರಣದ ತನಿಖೆ ಮತ್ತೆ ಚುರುಕುಗೊಂಡಿದೆ.