BREAKING NEWS: ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆ
ಅಶ್ವಸೂರ್ಯ/ಕಾರವಾರ: ಮುರುಡೇಶ್ವರದ ಸಮುದ್ರ ತಿರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೃತ ದೇಹವನ್ನು ಹೊರತೆಗೆದಿದ್ದಾರೆ.ಪ್ರವಾಸಕ್ಕೆ ಮುರುಡೇಶ್ವರಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ಆಟವಾಡುತ್ತಾ ಇದ್ದ ಸಮಯದಲ್ಲಿ ಬಾರಿಗಾತ್ರದ ಅಲೆಯ ಹೊಡೆತಕ್ಕೆ ಕೊಚ್ಚಿ ಹೋಗಿದ್ದ 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಓರ್ವ ವಿದ್ಯಾರ್ಥಿನಿ ಶ್ರವಂತಿಯ (15) ಶವ ಪತ್ತೆಯಾಗಿತ್ತು. ನೀರಿನಲ್ಲಿ ಕೊಚ್ಚಿ ಹೋಗಿದ್ದ ಉಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೂವರು ವಿದ್ಯಾರ್ಥಿನಿಯರ ಶವವನ್ನು ಸಮುದ್ರದಿಂದ ಹೊರತೆಗೆಯಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕಗಕೆ ತೆರಳಿದ್ದರು. ಈ ವೇಳೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ಒಬ್ಬ ಶಿಕ್ಷಕ ಆರುಮಂದಿ ವಿದ್ಯಾರ್ಥಿನಿಯರು ಸೇರಿ ಒಟ್ಟು 7 ಮಂದಿ ಸಮುದ್ರಪಾಲಾಗಿದ್ದರು. ಅವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಒಬ್ಬ ಶಿಕ್ಷಕನನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದರು.ಉಳಿದ ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಶವ ನಿನ್ನೆಯೆ ಪತ್ತೆಯಾಗಿತ್ತು. ಉಳಿದ ಮೂವರು ವಿದ್ಯಾರ್ಥಿನಿಯರು ಸಮುದ್ರದ ನೀರಿನ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಮೂವರಿಗಾಗಿ ನಿನ್ನೆಯಿಂದ ನಿರಂತರವಾಗಿ ಶೋಧಕಾರ್ಯ ಮುಂದುವರೆಸಲಾಗಿತ್ತು.
ಇದೀಗ ಮೂವರು ವಿದ್ಯಾರ್ಥಿನಿಯರ ಶವವನ್ನು ಕರಾವಳಿ ಕಾವಲು ಪಡೆ ಪತ್ತೆಮಾಡಿ ಹೊರತೆಗೆದಿದೆ.
ಪ್ರವಾಸಕ್ಕೆ ತೆರಳಿದ ವಿದ್ಯಾರ್ಥಿನಿಯರಲ್ಲಿ ನಾಲ್ವರು ವಿದ್ಯಾರ್ಥಿನಿಯರು ಶಿಕ್ಷಕರ ನಿರ್ಲಕ್ಷ್ಯದಿಂದ ಸಾವಿನ ಮನೆ ಸೇರಿದ್ದಾರೆ.ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಶಿಕ್ಷಕರು ಮಕ್ಕಳನ್ನು ಗಮನಿಸಬೇಕಾಗುತ್ತು ಆದರೆ ಅವರೆ ನೀರಿನಲ್ಲಿ ಇಳಿದುಕೊಂಡು ಮಕ್ಕಳಿಗೂ ಇಳಿಯುವುದಕ್ಕೆ ಅವಕಾಶ ಮಾಡಿಕೊಟ್ಟ ಕಾರಣಕ್ಕೆ ಇಂದು ನಾಲ್ವರು ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ತೆರಳಿ ತಮಗೆ ಅರಿವಿಲ್ಲದೆ ಸಮುದ್ರದ ಅಲೆಗಳ ಹೊಡೆತಕ್ಕೆ ನೀರಿನಲ್ಲಿ ಮುಳುಗಿ ಉಸಿರು ಚಲ್ಲಿದ್ದಾರೆ..ಜವಬ್ದಾರಿ ಇಲ್ಲದ ಶಿಕ್ಷಕರಿಂದ ನಾಲ್ವರು ವಿದ್ಯಾರ್ಥಿಗಳು ಮೃತರಾಗಿದ್ದಾರೆ.ಈ ಎಲ್ಲಾ ಬೆಳವಣಿಗೆಗೆ ಕಾರಣರಾದ ಶಿಕ್ಚಕರಿಗೆ ಸರಿಯಾದ ಶಿಕ್ಷೆ ಆಗಬೇಕಿದೆ..