Headlines

ಮಾಜಿ ಪ್ರಧಾನಿ 92 ವರ್ಷದ ಮನ್‌ಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ.ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ.

ಅಶ್ವಸೂರ್ಯ/ದೆಹಲಿ: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ದೇಶದ‌ ಮಾಜಿ‌ ಪ್ರಧಾನಿ ಮನಮೋಹನ್ ಸಿಂಗ್ ಅವರು ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ ಅವರು ‌ಗುರುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು.

ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ಶುಕ್ರವಾರ (27) ದಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನರೇಂದ್ರ ಮೋದಿ, ಪ್ರಧಾನಿ

ಮಲ್ಲಿಕಾರ್ಜುನ ಖರ್ಗೆ,ಎಐಸಿಸಿ ಅಧ್ಯಕ್ಷ

ಜಗದೀಪ್‌ ಧನಕರ್,ಉಪ ರಾಷ್ಟ್ರಪತಿ

ರಾಹುಲ್‌ಗಾಂಧಿ , ಲೋಕಸಭೆ ವಿರೋಧಪಕ್ಷದ ನಾಯಕ

ಪ್ರಿಯಾಂಕಾ ಗಾಂಧಿ, ಸಂಸದೆ, ಕಾಂಗ್ರೆಸ್

Leave a Reply

Your email address will not be published. Required fields are marked *

Optimized by Optimole
error: Content is protected !!