ಮಂಡ್ಯದ ಮೂವರು ಭ್ರಷ್ಟ ಪೊಲೀಸರು ಅಮಾನತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ
ಆದೇಶ.!
ASHWASURYA/SHIVAMOGGA
ಮಂಡ್ಯ: ಹೊರ ರಾಜ್ಯಗಳಿಂದ ಬರುವ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದ ಮಂಡ್ಯ ಜಿಲ್ಲೆಯ ಮೂವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ . ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಇಬ್ಬರು ಪೇದೆಗಳನ್ನು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿದ್ದಾರೆ.
ಹೊರ ರಾಜ್ಯಗಳಿಂದ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣ ಕೆಆರ್‌ಎಸ್ ನ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ಅವರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಿ ಒಂದಷ್ಟು ದಿನ ಪವಿತ್ರ ಖಾಕೀಯನ್ನು ಕಳಚುವಂತೆ ಮಾಡಿದ್ದಾರೆ.!
ಈ ಕುರಿತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಮತ್ತು ಇಬ್ಬರು ಪೊಲೀಸರು ಸೇರಿಕೊಂಡು ಹೊರ ರಾಜ್ಯದಿಂದ ಮಂಡ್ಯದ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ಪ್ರವಾಸಿಗರ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದರು.
ಈ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ಸೇರಿ ಇಬ್ಬರು ಪೊಲೀಸ್ ಪೆದೆಗಳನ್ನು ಅಮಾನತು ಮಾಡಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಠಾಣೆಯ ಮುಖ್ಯ ಪೇದೆ ಪುರುಷೋತ್ತಮ್, ಪೇದೆಗಳಾದ ಅನಿಲ್ ಕುಮಾರ್, ಪ್ರಭುಸ್ವಾಮಿ ಅಮಾನತ್ತಾದವರಾಗಿದ್ದಾರೆ. ಕೆಆರ್‌ಎಸ್ ಬೃಂದಾವನ ಗಾರ್ಡನ್ ವೀಕ್ಷಿಸಲು ಹೊರ ರಾಜ್ಯದಿಂದ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದರು. ಆಗ ಹೊರ ರಾಜ್ಯದ ವಾಹನಗಳನ್ನೇ ಗುರಿಯಾಗಿಸಿ ಹಣ ವಸೂಲಿ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿದೆ. ವೀಡಿಯೋ ಸಾಕ್ಷಿ ಆಧರಿಸಿ ಎಸ್‌ಪಿ ಮಲ್ಲಿಕಾರ್ಜುನ ಅವರು ಮೂವರು ಪೊಲೀಸರನ್ನು ಅಮಾನತ್ತು ಮಾಡಿದ್ದಾರೆ.