Headlines

ಮಧುಗಿರಿ ಪೊಲೀಸ್ ಕಛೇರಿಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆ; ವಿಡಿಯೋ ವೈರಲ್!

ASHWASURYA/SHIVAMOGGA

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದಾಗಿ ಸಂಪೂರ್ಣ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ ಇಂತಹ ನೀಚ ಅಧಿಕಾರಿಯಿಂದ
ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿಯೇ ಏನಿದು ಪೊಲೀಸಪ್ಪನ ಸರಸ ಸಲ್ಲಾಪ.! ನ್ಯಾಯ ಕೊಡಿಸಬೇಕಾದ ಪೊಲೀಸ್ ಅಧಿಕಾರಿಯೇ ಸ್ತ್ರೀ ಭಕ್ಷಕನಾದರೆ ನೊಂದಹೆಣ್ಣುಮಕ್ಕಳ ಗತಿ ಏನು.!? ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ದೂರು ಕೊಡಲು ಬಂದ ಮಹಿಳೆಯೊಂದಿದೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನುವುದು ತೀರಾ ಅಸಹ್ಯಕರವಾಗಿದೆ. ಇಂತಹ ಹೀನಾ ಮನಸ್ಸಿನ ಅಧಿಕಾರಿಗಳಿಂದ ಸಂಪೂರ್ಣ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುವಂತಾಗಿದೆ. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದಿದ್ದು
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ.
ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ.ಇಂತಹ ನೀಚರು ಇಲಾಖೆಗೆ ಬೇಕಾ ಎನ್ನುವುದು ಯಕ್ಷಪಶ್ನೆಯಾಗಿದೆ.?

Leave a Reply

Your email address will not be published. Required fields are marked *

Optimized by Optimole
error: Content is protected !!