Headlines

ಶಿವಮೊಗ್ಗ: ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಶಶಿಧರ್ ನಿಧನ.! ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಟ್ರಸ್ಟ್ ಸಂತಾಪ.

ಶಿವಮೊಗ್ಗ: ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಶಶಿಧರ್ ನಿಧನ.! ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಟ್ರಸ್ಟ್ ಸಂತಾಪ .

ಅಶ್ವಸೂರ್ಯ/ಶಿವಮೊಗ್ಗ: ಜಿಲ್ಲೆಯ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರರಾದ ಶಶಿಧರ್ ಅನಾರೋಗ್ಯದಿಂದ (39) ಇಂದು ಸಂಜೆ ನಿಧನರಾಗಿದ್ದಾರೆ.
ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಸುಮಾರು 6 ವರ್ಷದಿಂದ ಕೆಲಸ ಮಾಡುತ್ತಿದ್ದ ಶಶಿಧರ್ ಈ ಹಿಂದೆ 8 ವರ್ಷಗಳ ಕಾಲ ಚಾಮರಾಜ ನಗರ ಜಿಲ್ಲೆಯಲ್ಲಿ ಪಬ್ಲಿಕ್ ಟಿ.ವಿ. ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಬಿಜಾಪುರ ಜಿಲ್ಲೆಯಲ್ಲಿ ಈ ಟಿವಿ ವರದಿಗಾರರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು.
ಮಿತ ಭಾಷಿಯಾಗಿದ್ದ ಶಶಿಧರ್ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ವ್ಯಕ್ತಿತ್ವದವರಾಗಿದ್ದರು. ಕಡೂರು ಬಳಿಯ ಎಸ್. ಕಲ್ಲಳ್ಳಿ ಗ್ರಾಮದವರು.
ಇವರ ನಿಧನದಿಂದಾಗಿ ರಾಜ್ಯದ ಪತ್ರಿಕೋದ್ಯಮಕ್ಕೆ ದೊಡ್ಡ ನಷ್ಟವಾಗಿದೆ.

ಸಂತಾಪ: ಶಶಿಧರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪ್ರೆಸ್ ಟ್ರಸ್ಟ್ ನ ಅಧ್ಯಕ್ಷರು ಮತ್ತು ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!