ಹೊಳೆಹೊನ್ನೂರಿನ ಗಾಂಧಿ ಚೌಕಿಯಲ್ಲಿ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಆರೋಪಿಗಳ ಬಂಧನ

ಹೊಳೆಹೊನ್ನೂರಿನ ಗಾಂಧಿ ಚೌಕಿಯಲ್ಲಿ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಆರೋಪಿಗಳ ಬಂಧನ

ಶಿವಮೊಗ್ಗ :
ಹೊಳೆಹೊನ್ನೂರಿನ ಗಾಂಧಿ ಸರ್ಕಲ್‍ನಲ್ಲಿ ಆ.20 ರ ತಡರಾತ್ರಿಯಲ್ಲಿ ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
24 ರ ಗುರುವಾರದಂದು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಹೊಳೆಹೊನ್ನೂರು ಗಾಂಧಿ ಸರ್ಕಲ್‍ನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಜೋಳ ಕಸಿ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್, 24 ವರ್ಷ ಮತ್ತು ವಿನಯ್ 25 ವರ್ಷ, ಇವರು ಕೃಷಿ ಮತ್ತು ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಈ ಆರೋಪಿಗಳು ಆ.20 ರ ರಾತ್ರಿ ಜೋಗ ಜಲಪಾತಕ್ಕೆ ತೆರಳುವ ಮಾರ್ಗಮಧ್ಯೆ ಈ ಕೃತ್ಯವನ್ನು ಎಸಗಿದ್ದಾಗಿ ಒಪ್ಪಿಕೊಂಡಿರುತ್ತಾರೆ.
ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು 50 ಜನ ಪೊಲೀಸರ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಅಧಿಕಾರಿಗಳು ಸಿಬ್ಬಂದಿಗಳ ವರ್ಗ ಚುರುಕು ಕಾರ್ಯಚರಣೆ ಕೈಗೊಂಡ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ,ಇವರುಗಳು ಕೈಗೊಂಡ ಕ್ಷಿಪ್ರ ಕಾರ್ಯಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರೋಪಿಗಳು ಯಾವ ಉದ್ದೇಶದಿಂದ ಈ ಕೃತ್ಯವನ್ನು ಎಸಗಿದ್ದಾರೆ ಮತ್ತು ಇತರೆ ಮಾಹಿತಿಯನ್ನು ಕಲೆ ಹಾಕಲು ತನಿಖೆ ಕೈಗೊಳ್ಳಲಾಗುವುದು. ಇವರು ತೆರಳುತ್ತಿದ್ದ ಬೈಕ್‍ನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸ್ಥಳೀಯರು, ಗ್ರಾಮಸ್ಥರು ಗಾಂಧಿ ಪ್ರತಿಮೆಯನ್ನು ಪುನಃ ಪ್ರತಿಷ್ಟಾಪಿಸುವ ಕುರಿತು ಮನವಿ ಮಾಡಿದ್ದು, ಈ ವಿಷಯವನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಎಎಸ್‍ಪಿ ಅನಿಲ್‍ಕುಮಾರ್ ಭೂಮರೆಡ್ಡಿ, ಡಿವೈಎಸ್‍ಪಿ ನಾಗರಾಜ್, ಇತರೆ ಪೊಲೀಸ್ ಅಧಿಕಾರಿಗಳು ಹಾಜರಿದ್ದು ಮಾಹಿತಿ ನೀಡಿದ್ದಾರೆ

ಸುಧೀರ್ ವಿಧಾತ, ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!