Headlines

ಗದಗ | ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ – ನಗದು ಕಾಹದಪತ್ರ ವಶ.

{

ಗದಗ | ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ – ನಗದು ಕಾಹದಪತ್ರ ವಶ.

ಅಶ್ವಸೂರ್ಯ/ಗದಗ: ಗದಗ ನಗರದಲ್ಲಿ ಬಡ್ಡಿ ದಂಧೆ ಕೋರರ ಹಾವಳಿ ಮಿತಿಮೀರಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ 12 ಕಡೆಗಳಲ್ಲಿ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಬೆಟಗೇರಿ ಪೊಲೀಸರು ದಿಢೀರ್ ದಾಳಿ ಮಾಡಿ. ಲಕ್ಷ ಲಕ್ಷ ರೂಪಾಯಿಯ ಹಣದ ಕಂತೆಗಳು ಪತ್ತೆಯಾಗಿವೆ.
ಗದಗ ಹಾಗೂ ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಿಂದ ನಿದ್ದೆಯಲ್ಲಿದ್ದ ಬಡ್ಡಿ ದಂಧೆಕೋರರ ಚಡ್ಡಿ ತಂಡಿಯಾಗಿದೆ. ದಾಳಿ ವೇಳೆ ಮನೆಗಳಲ್ಲಿ 26.57 ಲಕ್ಷ ರೂ. ನಗದು ಪತ್ತೆಯಾಗಿದೆ. ಅಲ್ಲದೇ ಖಾಲಿ ಚೆಕ್‌ಗಳು,ಹಲವು ದಾಖಲೆಗಳು ಪತ್ತೆಯಾಗಿವೆ.

ಈ ಬಗ್ಗೆ ಮಾತಾಡಿರುವ ಎಸ್ಪಿ ಬಿ.ಎಸ್ ನೇಮಗೌಡ, ಅದರಲ್ಲಿ ಸಂಗಮೇಶ ದೊಡ್ಡಣ್ಣವರ ಎಂಬವರ ಮನೆಯಲ್ಲಿ 26.57 ಲಕ್ಷ ನಗದು, ಖಾಲಿ ಬಾಂಡ್, ಚೆಕ್ ಗಳು ಪತ್ತೆಯಾಗಿವೆ. ರವಿ ಕೌಜಗೇರಿ ಎಂಬವನ ಮನೆಯಲ್ಲಿ ಚೆಕ್‌ಗಳು, ಬಾಂಡ್ ಪೇಪರ್ಸ್, ಹಣ ಎಣಿಸುವ ಮಷಿನ್ ಪತ್ತೆಯಾಗಿದೆ. ಈ ಸಂಬಂಧ ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಕೆಲವರು ರಿಜಿಸ್ಟರ್ ಮಾಡಿ ವ್ಯವಹಾರ ಮಾಡುತ್ತಿದ್ದಾರೆ. ಕೆಲವರು ಅನಧಿಕೃತವಾಗಿ ವ್ಯವಹಾರ ಮಾಡುತ್ತಿದ್ದಾರೆ. ಧಮ್ಕಿ, ಬೆದರಿಕೆ ಹಾಕಿ ಹಣ ವಸೂಲಿ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಬಡ್ಡಿ ದಂಧೆಯಲ್ಲಿ ರೌಡಿಶೀಟರ್‌ಗಳು ಭಾಗಿಯಾಗಿದ್ದಾರೆ. ರೌಡಿಶೀಟರ್‌ಗಳಾದ ದರ್ಶನ್, ಉಮೇಶ್ ಸುಂಕದ, ಉದಯ ಸುಂಕದ ಮಾರುತಿ ಮುತಗಾರ, ಶಿವರಾಜ್ ಹಂಸನೂರ, ವಿಜಯ ಸೋಳಂಕಿ ಹಾಗೂ ಶ್ಯಾಮ್ ಕುರಗೋಡರನ್ನು ಪೊಲೀಸರು ವಶಕ್ಕೆ ಪಡೆದಿದು ಮುಂದಿನ ತನಿಖೆಗೆ ಮುಂದಾಗಿದ್ದಾರೆ.

ನಿಜಕ್ಕೂ ಖಡಕ್ ಅಧಿಕಾರಿ ಎಸ್ಪಿ ಬಿ.ಎಸ್ ನೇಮಗೌಡ ಅವರ ಈ ನಿರ್ಧಾರವನ್ನು ಗದಗ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಹೆಮ್ಮೆ ಪಡುತ್ತಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!