Headlines

ಖಡಕ್ ಎಸ್ಪಿ ಮಿಥುನ್‌ ಕುಮಾರ್ ಮಾರ್ಗದರ್ಶನದಲ್ಲಿ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ ಶಿವಮೊಗ್ಗ ಪೋಲಿಸರ ತಂಡ.

ಖಡಕ್ ಎಸ್ಪಿ ಮಿಥುನ್‌ ಕುಮಾರ್ ಮಾರ್ಗದರ್ಶನದಲ್ಲಿ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ ಶಿವಮೊಗ್ಗ ಪೋಲಿಸರ ತಂಡ.

ಅಶ್ವಸೂರ್ಯ/ಶಿವಮೊಗ್ಗ: ದಿ,11 ರಂದು ಬೆಳಗ್ಗೆ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಖಡಕ್ IPS ಅಧಿಕಾರಿ ಮಿಥುನ್ ಕುಮಾರ ಜಿ ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಹಾಗೂ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1, ಮತ್ತು ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2, ಶಿವಮೊಗ್ಗ ರವರ ಮಾರ್ಗದರ್ಶನದಲ್ಲಿ.

ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪವಿಭಾಗ ಮತ್ತು ಸಂಜೀವ್ ಕುಮಾರ್ ಟಿ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಬಿ ಉಪವಿಭಾಗ ಮತ್ತು ಕೃಷ್ಣ ಮೂರ್ತಿ ಪೊಲೀಸ್ ಉಪಾಧಿಕ್ಷಕರು, ಸಿಇಎನ್ ಪೊಲೀಸ್ ಠಾಣೆ ರವರ ಮೇಲ್ವಿಚಾರಣೆಯಲ್ಲಿ ರವಿ ಪಾಟೀಲ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ ರವರು ದೊಡ್ಡಪೇಟೆ ಪೊಲೀಸ್ ಠಾಣಾ ಸರಹದ್ದಿನ ಅಣ್ಣಾ ನಗರ ,ಮಾರ್ನಾಮಿ ಬೈಲು,ಕಾಮಾಕ್ಷಿ ಬೀದಿ ಯಲ್ಲಿ ಮತ್ತು ಹರೀಶ್ ಕೆ ಪಾಟೀಲ್, ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ ರವರು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರ ದಲ್ಲಿ, ಶ್ರೀಮತಿ ಚಂದ್ರಕಲಾ, ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಶಿಪುರ ದಲ್ಲಿ, ಶ್ರೀ ಸಿದ್ದೇಗೌಡ, ಪೊಲೀಸ್ ನಿರೀಕ್ಷಕರು, ಜಯನಗರ ಪೊಲೀಸ್ ಠಾಣೆ ರವರು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಗಂಗೂರು , ಬಸವನಗುಡಿಯಲ್ಲಿ ಗುರುರಾಜ್ ಕೆ ಟಿ, ಪೊಲೀಸ್ ನಿರೀಕ್ಷಕರು, ತುಂಗಾನಗರ ಪೊಲೀಸ್ ಠಾಣೆ ರವರು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಿಶೆಟ್ಟಿಕೊಪ್ಪ,

ಚಾಲುಕ್ಯನಗರದಲ್ಲಿ, ಸತ್ಯನಾರಾಯಣ, ಪೊಲೀಸ್ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರು ಪೊಲೀಸ್ ಠಾಣಾ ವ್ಯಾಪ್ತಿಯ ಇಂದಿರಾ ಬಡಾವಣೆ ಗುರುಪುರ ಸೇರಿದಂತೆ ಒಟ್ಟು 09 ಕಡೆಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಿ ಒಟ್ಟು 39 ಲಕ್ಷ ರೂಪಾಯಿ ನಗದು, 24 ಮೊಬೈಲ್, 02 ಲ್ಯಾಪ್ ಟಾಪ್, 72 ಚೆಕ್ ಗಳು, 19 ಆರ್ಸಿ ಬುಕ್ ಗಳು, 07 ವೆಹಿಕಲ್ ಬಾಂಡ್, 02 ಫಾರ್ಮ್ ನಂ 29, 30 ಮತ್ತು ಅಗ್ರಿಮೆಂಟ್ ಕಾಪಿ , ಪಾಸ್ ಬುಕ್, ಸೇಲ್ ಡೀಡ್, ಪಹಣಿ, 29 ಬೈಕ್ ಗಳು ಮತ್ತು 2 ಕಾರುಗಳನ್ನು ಅಮಾನತ್ತು ಪಡಿಸಿಕೊಂಡಿದ್ದು, ಒಟ್ಟು 09 ಆರೋಪಿತರ ವಿರುದ್ಧ ಒಟ್ಟು 09 ಪ್ರಕರಣಗಳನ್ನು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ದಾಳಿಯಿಂದ ಶಿವಮೊಗ್ಗದ ದೊಡ್ಡ ದೊಡ್ಡ ಬಡ್ಡಿ ದಂಧೆಕೋರರಲ್ಲಿ ಭಯ ಹುಟ್ಟಿದೆ.ಪೊಲೀಸರ ಕಾರ್ಯಚರಣೆ ಮುಂದುವರೆಯುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿದ್ದು ಶಿವಮೊಗ್ಗ ನಗರದ ಅಕ್ರಮ ಬಡ್ಡಿ ದಂಧೆಯ ವಿರುದ್ಧ ಸರಣಿ ದಾಳಿ ನೆಡೆಯುವ ಸಾಧ್ಯತೆ ಇದೆ.

ಒಟ್ಟಿನಲ್ಲಿ ಶಿವಮೊಗ್ಗ ನಗರದ ಬಡ್ಡಿ ದಂಧೆಕೋರರನ್ನು ಮಟ್ಟಹಾಕಲು‌ ಪೊಲೀಸರು ಮುಂದಾಗಿದ್ದಾರೆ ಎನ್ನುವುದಂತು ಸತ್ಯ.

Leave a Reply

Your email address will not be published. Required fields are marked *

Optimized by Optimole
error: Content is protected !!