
ನಾನು ಕೂಡ ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿ, ಟಿಕೆಟ್ ಬೇಕು ಅಂತ ಕೇಳಿದ್ದೇನೆ. ವರಿಷ್ಠರು ಏನ್ ತೀರ್ಮಾನ ಮಾಡ್ತಾರೆ ಅಂತ ನೋಡಬೇಕು ಎಂದು ಎಂಪಿ ರೇಣುಕಾಚಾರ್ಯ ದೊಡ್ಡ ಬಾಂಬೆ ಸಿಡಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಬಿಜೆಪಿಯ ಕೆಲ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ಆಯಾ ನೂರು ಮಂಜುನಾಥ್ ಕಾಂಗ್ರೆಸ್ ಸೇರಿದ ಬೆನ್ನಿಗೆ ಬಿಜೆಪಿಯ ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಹಾಲಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿರುವ ರೇಣುಕಾಚಾರ್ಯ ಅವರ ನಡೆ ಬಿಜೆಪಿ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಬಾರಿ ಕುತೂಹಲ ಮೂಡಿಸಿರುವ ರೇಣುಕಾಚಾರ್ಯ ಅವರು ಸಿಎಂ
ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಎಂ ಅವರೊಂದಿಗೆ ಚರ್ಚೆ ಮಾಡಿದ ಅವರು, ಕ್ಷೇತ್ರದ ಸಂಬಂಧ ಚರ್ಚೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸುಧೀರ್ ವಿಧಾತ, ಶಿವಮೊಗ್ಗ

