ಮುಂದಿನ ದಿನದಲ್ಲಿ ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆ ಸರ್ಕಾರ ಮುಂದಾಗಲಿದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ದಿನದಲ್ಲಿ ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆ ಸರ್ಕಾರ ಮುಂದಾಗಲಿದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ LKG, ಮತ್ತು UKG ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧುಬಂಗಾರಪ್ಪ, ರಾಜ್ಯದಲ್ಲಿ 15 ಕ್ಕಿಂತ ಕಡಿಮೆ ಮಕ್ಕಳು ಇರುವ ಸುಮಾರು 22 ಸಾವಿರ ಶಾಲಗಳಿವೆ. ಕಡಿಮೆ ಮಕ್ಕಳಿರುವ ಶಾಲೆಗಳನ್ನು ಉತ್ತಮ ಶಾಲೆಗಳೊಂದಿಗೆ ಸೇರಿಸಲಾಗುತ್ತದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯನವರ ಜೊತೆಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಯಾವ ಯಾವ ಸ್ಥಳದಲ್ಲಿ ಎನ್ ಇಪಿ ಜಾರಿಯಾಗಿದೆಯೋ ಅಲ್ಲೆಲ್ಲಾ ಹಂತ ಹಂತವಾಗಿ ಮಕ್ಕಳಿಗೆ ತೊಂದರೆಯಾಗಿದೆ. ಅದರ ಬದಲಾಗಿ ಜನರ ಅಪೇಕ್ಷೆಯಂತೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಗುರು , ಕಮ್ಮರಡಿ

Leave a Reply

Your email address will not be published. Required fields are marked *

Optimized by Optimole
error: Content is protected !!