ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡ ಹೈದರ್ ಬರ್ಬರ ಹತ್ಯೆ ; ಶಾಸಕ ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದ ಹೈದರ್.!
ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ, ಅಷ್ಟೋತ್ತಿಗಾಗಲೇ ಹಂತಕರ ಲಾಂಗಿನೇಟಿಗೆ ಉಸಿರು ಚಲ್ಲಿದ್ದ.! ವಿಚಾರ ತಿಳಿಯುತ್ತಿದ್ದಂತೆ ಹೈದರ್ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಹಂತಕರಿಗೆ ಸೇಡು ತೀರಿಸಿಕೊಳ್ಳವುದಾಗಿ ಮೇಸೆಜ್ ರವಾನಿಸಿದ್ದರು.ಜೋತೆಗೆ ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
Ashwasurya/Shivamogga
ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರಿನಲ್ಲಿ ಕಾಂಗ್ರೆಸ್ ಯುವ ಮುಖಂಡ ಹೈದರ್ ಅಲಿ ತಡ ರಾತ್ರಿ ಲೈವ್ ಬ್ಯಾಂಡ್ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಆತನನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ಹಂತಕರ ಪಡೆ ಹೈದರ್ ನನ್ನು ಬಂದು ಅಡ್ಡಗಟ್ಟಿ ಕ್ಷಣಮಾತ್ರದಲ್ಲಿ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಮಾಡಿ ನಡು ರಸ್ತೆಯಲ್ಲೆ ನೆತ್ತರು ಹರಿಸಿ ಕೊಲೆ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡ ಮೃತ ಹೈದರ್ ಅಲಿಯನ್ನು
ಬೆಂಗಳೂರು ನಗರದ ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಸ್ನೇಹಿತನ ಜೋತೆಗೆ ಬೈಕಿನಲ್ಲಿ ಬರುತ್ತಿರುವಾಗ ಅಡ್ಡಗಟ್ಟಿ ಹಂತಕರ ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ, ಅಷ್ಟೋತ್ತಿಗಾಗಲೇ ಹಂತಕರ ಲಾಂಗಿನೇಟಿಗೆ ಉಸಿರು ಚಲ್ಲಿದ್ದ.! ವಿಚಾರ ತಿಳಿಯುತ್ತಿದ್ದಂತೆ ಹೈದರ್ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಹಂತಕರಿಗೆ ಸೇಡು ತೀರಿಸಿಕೊಳ್ಳವುದಾಗಿ ಮೇಸೆಜ್ ರವಾನಿಸಿದ್ದರು.ಜೋತೆಗೆ ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಸಫಲರಾಗಿದ್ದರು.
ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದ ಕಾಂಗ್ರಸ್ ಯುವ ಮುಖಂಡ. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿಯು ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಭಲೇ ಬಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರ ಬರಬೇಕಿದೆ…