ಶಿವಮೊಗ್ಗ : ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಹೀನಾಯ ಕೃತ್ಯ ನಡೆದಿದೆ, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ.
ಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ದು ತಿಳಿದುಬಂದಿದೆ.! ತಕ್ಷಣವೇ ಸ್ಥಳೀಯರು ಮಹಿಳೆಯನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಕರಣದ ಹಿನ್ನೆಲೆ.?
ತೋಟದಲ್ಲಿ ಮಹಿಳೆ ಮೇಕೆಗಳನ್ನು ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ ತೋಟದ ಮಾಲೀಕ ರಾಮನಹಳ್ಳಿ ಶಿವಕುಮಾರ್ ಎಂಬುವವರ ಮಗ ಅರುಣ್ ಸಿಟ್ಟಿಗೆದ್ದು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಮಹಿಳೆಯ ಸೀರೆ ಬಿಚ್ಚಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾನಂತೆ ಸಾಲದಕ್ಕೆ ಆಕೆಯನ್ನು ನಂತರ ಮರಕ್ಕೆ ಕಟ್ಟಿ ಹಾಕಲು ಯತ್ನಿಸಿದಾಗ ಹೇಗೋ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾಳೆ. ಮೇಕೆಗಳು ತೋಟದಲ್ಲಿ ಗಿಡಗಳ ಎಲೆ ತಿಂದಿದ್ದಾವೆ ಎಂದು ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.