ಕನಕಪುರ ಅರಣ್ಯದಲ್ಲಿ ಎಣ್ಣೆ ಪಾರ್ಟಿ.! ಪ್ರಶ್ನಿಸಿದ ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ರೌಡಿಗಳಿಂದ ಹಲ್ಲೆ.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಕನಕಪುರ : ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್
ಮಾಡಿದ್ದಾರೆ.ಕನಕಪುರ ತಾಲೂಕಿನ ಸಾತನೂರು ಅರಣ್ಯ ಪ್ರದೇಶದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಅಲ್ಲಿದ್ದವರನ್ನು ಪ್ರಶ್ನಿಸಿದ್ದಾರೆ. ಅ ಸ್ಥಳದಲ್ಲಿದ್ದ ರೌಡಿಶೀಟರ್ ಸೇರಿದಂತೆ ಕುಡುಕರ ಗುಂಪೊಂದು ಪ್ರಶ್ನೆಮಾಡಿದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ನಡೆದಿದೆ.
ಆರೋಪಿಗಳನ್ನು ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂದು ಗುರುತಿಸಲಾಗಿದ್ದು, ಈ ಮೂವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಗ್ರಾಮದ ಐವರು ಯುವಕರು ಕಬ್ಬಾಳು ಅರಣ್ಯ ವ್ಯಾಪ್ತಿಯಲ್ಲಿ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಯುವಕರನ್ನ ಪ್ರಶ್ನೆ ಮಾಡಿದ್ದಕ್ಕೆ ಗಲಾಟೆ ಆರಂಭವಾಗಿದೆ. ಗಲಾಟೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದು, ಅರಣ್ಯ ಇಲಾಖೆ ವಾಹನಕ್ಕೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ.
ಕೂಡಲೇ 112 ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಜಗಳ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕರು ಪೊಲೀಸರ ಮೇಲೆಯೂ ಹಲ್ಲೆ ಮಾಡಿ, ಪೊಲೀಸರ ಟ್ಯಾಬ್ ಒಡೆದು ಹಾಕಿದ್ದಾರೆ. ಬಳಿಕ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೂವರು ಆರೋಪಿಗಳನ್ನು ಸಾತನೂರು ಪೊಲೀಸರು ಬಂಧಿಸಿದ್ದು, ಸ್ಥಳದಿಂದ ಎಸ್ಕೇಪ್ ಆಗಿರುವ ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.