ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವರಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ.
ASHWASURYA/SHIVAMOGGA
news. ashwasurya.in
ಅಶ್ವಸೂರ್ಯ/ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ತಮಿಳುನಾಡು ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿರುವ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ, ಭರತನಾಟ್ಯ ಮತ್ತು ಚಿತ್ರಕಲೆಯಲ್ಲಿ ಪ್ರವೀಣರು. ಗುರು ಎ.ಎಸ್. ಮುರಳಿ ಬಳಿ ಕರ್ನಾಟಕ ಸಂಗೀತವನ್ನು ಕಲಿತಿರುವ ಅವರು, ನಂತರ ಬ್ರಹ್ಮಗಾನ ಸಭಾ ಮತ್ತು ಕಾರ್ತಿಕ್ ಫೈನ್ ಆರ್ಟ್ಸ್ನಂತಹ ಪ್ರತಿಷ್ಠಿತ ವೇದಿಕೆಗಳಲ್ಲಿ ಪ್ರದರ್ಶನ ನೀಡಿದ್ದಾರೆ.
ತೇಜಸ್ವಿ ಸೂರ್ಯ ಪತ್ನಿ ಓದಿದ್ದೇನು?
ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಶಾಸ್ತ್ರ ವಿಶ್ವವಿದ್ಯಾಲಯದಿಂದ ಜೈವಿಕ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮದ್ರಾಸ್ ವಿಶ್ವವಿದ್ಯಾಲಯದಿಂದ ಸಂಸ್ಕೃತ ಅಧ್ಯಯನ ಮಾಡುವುದರ ಜೊತೆಗೆ, ಅವರು ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾವನ್ನೂ ಹೊಂದಿದ್ದಾರೆ.
ಶಿವಶ್ರೀ ಸಾಮಾಜಿಕ ಮಾಧ್ಯಮದಲ್ಲೂ ತುಂಬಾ ಸಕ್ರಿಯರಾಗಿದ್ದಾರೆ. ಅವರ ಯೂಟ್ಯೂಬ್ ಚಾನೆಲ್ನಲ್ಲಿ ಭಕ್ತಿ ಸಂಗೀತ ಮತ್ತು ಇತರ ಸಾಂಸ್ಕೃತಿಕ ಪ್ರದರ್ಶನಗಳ ವಿಡಿಯೋಗಳು ಕಾಣಬಹುದು. ಅವರ ಹಾಡುಗಳು ಸ್ಪಾಟಿಫೈ ಮತ್ತು ಯೂಟ್ಯೂಬ್ನಂತಹ ಪ್ರಮುಖ ವೇದಿಕೆಗಳಲ್ಲಿಯೂ ಬಿಡುಗಡೆಯಾಗಿವೆ.