“ನಮ್ಮ ಪೊಲೀಸ್ ನಮ್ಮ ಹೆಮ್ಮೆ” “ಎಲ್ಲರಿಗಾಗಿ ಫಿಟ್ ನೆಸ್” ಮತ್ತು “ಮಾದಕ ದ್ರವ್ಯ ಮುಕ್ತ ಕರ್ನಾಟಕ”
ಇದು ಪೋಲಿಸ್ ಓಟ 2025-26 “ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಮಾರ್ಚ್, 9 ರಂದು,ಬನ್ನಿ ಭಾಗವಹಿಸಿ ಕಾರ್ಯವನ್ನು ಯಶಸ್ವಿಗೊಳಿಸಿ. 🏃♀️🏃🏃♂️🏃♀️🏃🏃♂️🏃♀️🏃🏃♂️
ಅಶ್ವಸೂರ್ಯ/ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಓಟ – 2024 ರ ಯಶಸ್ಸಿನ ಹಿನ್ನೆಲೆಯಲ್ಲಿ , ಶಿವಮೊಗ್ಗ ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ ಕೆ ಐಪಿಎಸ್ ಅವರ ಸಾರಥ್ಯದಲ್ಲಿ 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟವನ್ನು “ನಮ್ಮ ಪೊಲೀಸ್ ನಮ್ಮ ಹೆಮ್ಮೆ,” “ಎಲ್ಲರಿಗಾಗಿ ಫಿಟ್ ನೆಸ್” ಮತ್ತು “ಮಾದಕ ದ್ರವ್ಯ ಮುಕ್ತ ಕರ್ನಾಟಕ” ಧೈಯ ವಾಖ್ಯದೊಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕಃ 09-03-2025 ರಂದು ಬೆಳಿಗ್ಗೆ 6 ಗಂಟೆಗೆ ಶಿವಮೊಗ್ಗ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5K ಮತ್ತು ಪುರುಷರಿಗಾಗಿ 10 K ಮ್ಯಾರಥಾನ್ ಓಟವನ್ನು ಹಮ್ಮಿಕೊಂಡಿದ್ದು, 5K ಮ್ಯಾರಥಾನ್ ಓಟವನ್ನು ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತದ ಮಾರ್ಗವಾಗಿ ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮುಖಾಂತರ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಗುದು.
10K ಮ್ಯಾರಥಾನ್ ಓಟವನ್ನು ಇದೇ ಮಾರ್ಗದಲ್ಲಿ 2 ಸುತ್ತುಗಳು ಓಡಿ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಮುಕ್ತಾಯ ಮಾಡಲಾಗುವುದು.
ಸದರಿ ಮ್ಯಾರಥಾನ್ ಓಟದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಕೆ.ಎಸ್.ಆರ್.ಪಿ 8ನೇ ಪಡೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು, ಕೆ.ಎಸ್.ಐ.ಎಸ್.ಎಫ್ ಶಿವಮೊಗ್ಗದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು, ರೈಲ್ವೇ ಪೊಲೀಸ್ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್ / ಎನ್.ಸಿ.ಸಿ, ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳು ವಿಧ್ಯಾರ್ಥಿಗಳು ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಭಾಗವಹಿಸಲಿದ್ದು, ಇವರೊಂದಿಗೆ ಮ್ಯಾರಥಾನ್ ಓಟದಲ್ಲಿ ಸಾರ್ವಜನಿಕರು ಮತ್ತು ಮಾಧ್ಯಮ ಮಿತ್ರರು ಸಹಾ ಭಾಗವಹಿಸುತ್ತಿದ್ದಾರೆ. ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಪುರುಷ ಮತ್ತು ಮಹಿಳಾ ಓಟಗಾರರಿಗೆ, ನಗದು ಬಹುಮಾನ, ಪ್ರಶಂಸನಾ ಪತ್ರ ಮತ್ತು ಪದಕಗಳನ್ನು ನೀಡಲಾಗುವುದು. ಮ್ಯಾರಥಾನ್ ಓಟದಲ್ಲಿ ಭಾಗವಹಿಸಲು ಇಚ್ಚೆಯುಳ್ಳವರು ಈಗಾಗಲೇ ನೊಂದಣಿ ಮಾಡಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶ್ರೀ ಸಂತೋಷ್ ಕುಮಾರ್, ಸಿಪಿಐ, ಶಿವಮೊಗ್ಗ ಸಂಚಾರ ವೃತ್ತ, ಮೊಬೈಲ್ ನಂಬರ್ 9480803309 ಮತ್ತು ಶ್ರೀ ಸತ್ಯನಾರಾಯಣ್, ಪಿಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480803332 ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ನಂಬರ್ 9480803300 ಗೆ ಸಂಪರ್ಕಿಸ ಬಹುದಾಗಿರುತ್ತದೆ.
ಈ ಕಾರ್ಯಕ್ರಮದ ಯಶಸ್ವಿಯಾಗಿ ನೆರವೆರಲು ಶಿವಮೊಗ್ಗದ ನಾಗರಿಕರು ಭಾಗವಹಿಸಿ ಪ್ರೋತ್ಸಾಹಿಸಬೇಕಿದೆ. “ನಮ್ಮ ಪೊಲೀಸ್ ನಮ್ಮ ಹೆಮ್ಮೆ’