Headlines

ಮಂಗಳೂರು : ಕಾಣೆಯಾಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮತ್ತು 45 ವರ್ಷದ ಆಟೋ ಚಾಲಕ ಶವವಾಗಿ ಪತ್ತೆ.!

ಮಂಗಳೂರು : ಕಾಣೆಯಾಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮತ್ತು 45 ವರ್ಷದ ಆಟೋ ಚಾಲಕ ಶವವಾಗಿ ಪತ್ತೆ.!

ASHWA SURYA/SHIVAMOGGA

ಅಶ್ವ ಸೂರ್ಯ/ ಮಂಗಳೂರು ಮಾ.11: ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಮತ್ತು ಆಟೋ ಚಾಲಕನ ಶವ ಕಾಡಿನಲ್ಲಿ ಅಕೇಶಿಯಾ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತರನ್ನು ಆಟೋ ಚಾಲಕ ಪ್ರದೀಪ್‌(42) ಮತ್ತು 15 ವರ್ಷದ ಬಾಲಕಿ ಎಂದು ಗುರುತ್ತಿಸಲಾಗಿದೆ.
ಕಳೆದ ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್‌ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿದ್ದರು.ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್‌‍ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತು.

ಅದೇ ದಿನ ಮಗಳು ನಾಪತ್ತೆಯಾದ ಹಿನ್ನಲೆಯಲ್ಲಿ ಕುಂಬಳೆ ಪೊಲೀಸರಿಗೆ ಅಪ್ರಾಪ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಯ ತನಿಖೆ ನಡೆಸಿದರೂ ಇಬ್ಬರೂ ಪತ್ತೆಯಾಗಿರಲಿಲ್ಲ. ಇಬ್ಬರ ಮೊಬೈಲ್‌ ಫೋನ್‌ಗಳು ಮಂಡೆಕಾಪು ಬಳಿ ಸ್ವಿಚ್‌ ಆಫ್‌ ಆಗಿರುವುದು ತನಿಖೆಯಲ್ಲಿ ಗೊತ್ತಾಗಿದೆ.ಇದರ ಆಧಾರದ ಮೇಲೆ ಡ್ರೋನ್‌ ಹಾಗೂ ಪೊಲೀಸ್‌‍ ಶ್ವಾನ ಬಳಸಿ ಶೋಧ ಕಾರ್ಯ ನಡೆಸಲಾಗಿತ್ತು.ಎಷ್ಟೇ ಹುಡುಕಿದರು ಇಬ್ಬರ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.!

ಅಪ್ರಾಪ್ತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪೋಷಕರು ಹೈಕೋರ್ಟ್‌ ಮೊರೆ ಹೋಗಿ ಹೇಬಿಯಸ್‌‍ ಕಾರ್ಪಸ್‌‍ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಇಂದು ಸ್ಥಳೀಯರ ನೆರವಿನೊಂದಿಗೆ ಇಬ್ಬರ ಮನೆಯ ಸಮೀಪ ಹುಡುಕಾಟ ಮಾಡಲಾಗಿತ್ತು.ಎಕರೆಗಟ್ಟಲೆ ಹರಡಿರುವ ಅಕೇಶಿಯಾ ಅರಣ್ಯದಲ್ಲಿ ಶೋಧ ನಡೆಸುತ್ತಿದ್ದ ವೇಳೆ ಒಂದೇ ಮರಕ್ಕೆ ಪ್ಲಾಸ್ಟಿಕ್‌ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ಅದೆ ಸ್ಥಳದಲ್ಲಿ ಒಂದು ಚಾಕು ಮತ್ತು ಎರಡು ಮೊಬೈಲ್‌ ಫೋನ್‌ಗಳು ಪತ್ತೆಯಾಗಿದ್ದು ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.ಆಟೋ ಚಾಲಕ ಪ್ರದೀಪ್‌ ಆಗಾಗ ಬಾಲಕಿ ಮನೆಗೆ ಬರುತ್ತಿದ್ದ ಎಂದು ತಿಳಿದುಬಂದಿದ್ದು ಇವರು ಪ್ರೀತಿಸುತ್ತಿದ್ದರಾ ಎನ್ನುವುದು ತಿಳಿದುಬಂದಿಲ್ಲ.ಒಟ್ಟಿನಲ್ಲಿ ಈ ಪ್ರಕರಣ ಭಾರಿ ಸದ್ದು ಮಾಡಿದೆ.ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!